Skip to main content

Police Roundup

ಕೆಐಎಯಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ — ₹12.57 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ, ಇಬ್ಬರ ಬಂಧನ

Share News

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಇಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.

 

​ಬ್ಯಾಂಕಾಕ್‌ನಿಂದ ಆಗಮಿಸಿದ ಇಬ್ಬರು ಪ್ರಯಾಣಿಕರ ಲಗೇಜ್‌ಗಳನ್ನು ಅನುಮಾನದ ಆಧಾರದ ಮೇಲೆ ತೀವ್ರ ಪರಿಶೀಲನೆ ನಡೆಸಿದಾಗ ಕಳ್ಳಸಾಗಣೆ ಯತ್ನ ಬೆಳಕಿಗೆ ಬಂದಿದೆ. ವಶಪಡಿಸಿಕೊಳ್ಳಲಾದ ಒಟ್ಟು 36 ಕೆಜಿ ಹೈಡ್ರೋಪೋನಿಕ್ ಗಾಂಜಾದ ಅಂದಾಜು ಮಾರುಕಟ್ಟೆ ಮೌಲ್ಯ ₹12.57 ಕೋಟಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

​ಈ ಹಿಂದೆ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ್ದ ಕಾರ್ಯಾಚರಣೆಯಲ್ಲಿ 15.3 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಲಾಗಿತ್ತು. ಇದೀಗ ಎರಡೂ ಪ್ರಕರಣಗಳನ್ನು ಸೇರಿ ಒಟ್ಟು 36 ಕೆಜಿ ಗಾಂಜಾವನ್ನು ಕಸ್ಟಮ್ಸ್ ವಶಕ್ಕೆ ಪಡೆದಂತಾಗಿದೆ.

 

​ಅಕ್ರಮವಾಗಿ ಗಾಂಜಾ ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಇಬ್ಬರೂ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಅವರ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಅಂಡ್ ಸೈಕೋಟ್ರೋಪಿಕ್ ಸಬ್‌ಸ್ಟೆನ್ಸಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಕಸ್ಟಮ್ಸ್ ಅಧಿಕಾರಿಗಳು ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

 

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin