Skip to main content

Police Roundup

ಕಾಡುಹಂದಿ ಶಿಕಾರಿ—ಅರಣ್ಯಾಧಿಕಾರಿಗಳ ಮಿಂಚಿನ ದಾಳಿ, ಓರ್ವ ಬಂಧನ, ಮೂವರಿಗೆ ಶೋಧ

Share News

ರಾಣೇಬೆನ್ನೂರು: ತಾಲೂಕಿನ ಹುಲ್ಲತ್ತಿ ಗ್ರಾಮದ ಬಳಿ ಕಾಡುಹಂದಿಯನ್ನು ಬೇಟೆಯಾಡಿ ಅದರ ಮಾಂಸವನ್ನು ಸಾಗಿಸಲು ಯತ್ನಿಸುತ್ತಿದ್ದ ಅಡ್ಡೆಯ ಮೇಲೆ ಅರಣ್ಯಾಧಿಕಾರಿಗಳು ಮಿಂಚಿನ ದಾಳಿ ನಡೆಸಿ, ಓರ್ವ ಆರೋಪಿಯನ್ನು ಬಂಧಿಸಿರುವ ಘಟನೆ ನಡೆದಿದೆ.

 

​ಇಲ್ಲಿನ ಕೃಷ್ಣಮೃಗ ಅಭಯಾರಣ್ಯದ ವ್ಯಾಪ್ತಿಯಲ್ಲಿ ಈ ಅಕ್ರಮ ಶಿಕಾರಿ ನಡೆದಿದ್ದು, ಬಸಲಿಕಟ್ಟೆ ತಾಂಡಾದ ಚಂದ್ರು ಹನುಮಂತಪ್ಪ ಲಮಾಣಿ ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

 

​ಇದೇ ಪ್ರಕರಣದಲ್ಲಿ ಭಾಗಿಯಾಗಿದ್ದ ಬಸಲಿಕಟ್ಟಿ ತಾಂಡಾದ ಬೀರೇಶ್ ಲಮಾಣಿ, ಸಂಜು ಲಮಾಣಿ ಹಾಗೂ ವಿಜಿ ಲಮಾಣಿ ಎಂಬುವವರು ಘಟನಾ ಸ್ಥಳದಿಂದ ತಲೆಮರೆಸಿಕೊಂಡಿದ್ದು, ಅರಣ್ಯ ಸಿಬ್ಬಂದಿ ಅವರಿಗಾಗಿ ಬಲೆ ಬೀಸಿದ್ದಾರೆ.

 

​ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಪೂಜಾರ ಅವರ ನೇತೃತ್ವದಲ್ಲಿ ಹಿರಿಯ ಹಾಗೂ ಕಿರಿಯ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಯ ತಂಡ ಈ ಜಂಟಿ ಕಾರ್ಯಚರಣೆಯಲ್ಲಿ ಪಾಲ್ಗೊಂಡಿತ್ತು.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin