Skip to main content

Police Roundup

ಅಪಾಯಕಾರಿ ಸ್ಥಿತಿಯಲ್ಲಿ ಟಿಂಬರ್ ಸಾಗಾಟ: 4 ಲಾರಿಗಳು ಕುಶಾಲನಗರ ಸಂಚಾರಿ ಪೊಲೀಸ್ ವಶಕ್ಕೆ!

Share News

ಕುಶಾಲನಗರ: ಅಪಾಯಕಾರಿ ಹಾಗೂ ಅಸುರಕ್ಷಿತ ರೀತಿಯಲ್ಲಿ ಟಿಂಬರ್ (ಮರ) ಹೇರಿಕೊಂಡು ಸಂಚರಿಸುತ್ತಿದ್ದ ನಾಲ್ಕು ಟಿಂಬರ್ ಲಾರಿಗಳನ್ನು ಕುಶಾಲನಗರ ಸಂಚಾರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

 

​ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚಿನ ತೂಕ (ಓವರ್‌ಲೋಡ್) ಹಾಗೂ ಸಂಪೂರ್ಣ ಲಾರಿಯ ಮಿತಿಗಿಂತ ಹೊರಕ್ಕೆ ಚಾಚಿಕೊಂಡಿರುವ ರೀತಿಯಲ್ಲಿ ಅಪಾಯಕಾರಿಯಾಗಿ ಮರಗಳನ್ನು ತುಂಬಿಕೊಂಡು ಸಂಚರಿಸುತ್ತಿದ್ದಾಗ ಈ ಕ್ರಮ ಕೈಗೊಳ್ಳಲಾಗಿದೆ.

 

​ಕುಶಾಲನಗರ ಪೊಲೀಸ್ ನಿರೀಕ್ಷಕ ಪ್ರದೀಪ್ ಕುಮಾರ್ ಅವರ ನೇತೃತ್ವದಲ್ಲಿ ಮಂಗಳವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಸಂಚಾರಿ ಪೊಲೀಸ್ ತಂಡ, ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ ಈ ನಾಲ್ಕೂ ಲಾರಿಗಳನ್ನು ತಡೆದು ವಶಕ್ಕೆ ಪಡೆದಿದೆ.

 

​ಸಾರ್ವಜನಿಕರ ಹಾಗೂ ರಸ್ತೆ ಸಂಚಾರದ ಸುರಕ್ಷತೆಗೆ ಭಂಗ ತರುವ ರೀತಿಯಲ್ಲಿ ಭಾರೀ ಗಾತ್ರದ ಮರಗಳನ್ನು ಕೊಂಡೊಯ್ಯುವ ವಾಹನಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಈ ಸಂದರ್ಭದಲ್ಲಿ ಪೊಲೀಸರು ಎಚ್ಚರಿಸಿದ್ದಾರೆ.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin