Skip to main content

Police Roundup

ಮೈಸೂರು: ಜಂಬೂ ಸವಾರಿ ಸುಗಮ ಸಂಚಾರಕ್ಕೆ ಪೊಲೀಸ್ ಇಲಾಖೆ ಸಿದ್ಧತೆ; ನಗರ ಪೊಲೀಸ್ ಆಯುಕ್ತರ ಸೀಮಾ ಲಾಟ್ಕರ್ ಅವರಿಂದ ಮಾರ್ಗ ಪರಿಶೀಲನೆ

Share News

ಮೈಸೂರು: ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ಮೆರವಣಿಗೆಯು ಸುಗಮವಾಗಿ ನಡೆಯಲು ಹಾಗೂ ಸಾರ್ವಜನಿಕರ ಸುರಕ್ಷತೆ-ಭದ್ರತೆ ಖಚಿತಪಡಿಸಲು ಪೊಲೀಸ್ ಇಲಾಖೆ ಸಮರಪಾದಾದಿಯಲ್ಲಿ ಸಿದ್ಧತೆ ಕೈಗೊಂಡಿದೆ.

 

​ಈ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರಾದ ಶ್ರೀಮತಿ ಸೀಮಾ ಲಾಟ್ಕರ್ (IPS) ಅವರು, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹಾಗೂ ಎನ್.ಆರ್. ಉಪವಿಭಾಗದ ಎಸಿಪಿ ಅವರೊಂದಿಗೆ ಜಂಬೂ ಸವಾರಿ ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಸ್ಥಳ ಪರಿಶೀಲನೆ ನಡೆಸಿದರು.

 

​ಮೆರವಣಿಗೆ ಸಾಗುವ ಪ್ರಮುಖ ರಸ್ತೆಗಳು, ಜಂಕ್ಷನ್‌ಗಳು ಹಾಗೂ ಮಾರ್ಗದಲ್ಲಿರುವ ಎತ್ತರದ ಕಟ್ಟಡಗಳನ್ನು ಪರಿಶೀಲಿಸಿದ ಅಧಿಕಾರಿಗಳು, ಸಂಚಾರ ದಟ್ಟಣೆ ಉಂಟಾಗದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿದರು. ಅಲ್ಲದೆ, ಲಕ್ಷಾಂತರ ಜನಸಂಖ್ಯೆ ಸೇರುವ ನಿರೀಕ್ಷೆಯಿರುವುದರಿಂದ ಜನದಟ್ಟಣೆ ನಿಯಂತ್ರಣ, ಸಂಚಾರ ಮಾರ್ಗ ಬದಲಾವಣೆ (ಡೈವರ್ಷನ್) ಹಾಗೂ ಭದ್ರತಾ ಬಂದೋಬಸ್ತ್ ಕುರಿತು ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡಲಾಯಿತು.

 

​ಜಂಬೂ ಸವಾರಿ ಮೆರವಣಿಗೆಯು ಯಾವುದೇ ಅಡಚಣೆಯಿಲ್ಲದೆ ಶಾಂತಿಯುತವಾಗಿ ಹಾಗೂ ಅತ್ಯಂತ ಸುರಕ್ಷಿತವಾಗಿ ನೆರವೇರಲು ಪೊಲೀಸ್ ಇಲಾಖೆ ಸಂಪೂರ್ಣವಾಗಿ ಸಜ್ಜಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin