Skip to main content

Police Roundup

ಮಕ್ಕಳಾಗಿಲ್ಲವೆಂದು ನಿತ್ಯ ಕಿರುಕುಳ: ಪತಿಯನ್ನು ಚಾಕುವಿನಿಂದ ಇರಿದು ಹತ್ಯೆಗೈದ ಪತ್ನಿ ಬಂಧನ

Share News

ಬೆಂಗಳೂರು: ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ನಿತ್ಯ ಮದ್ಯದ ನಶೆಯಲ್ಲಿ ಹಲ್ಲೆ ನಡೆಸಿ ಕಿರುಕುಳ ನೀಡುತ್ತಿದ್ದ ಪತಿಯನ್ನು ಪತ್ನಿಯೇ ಅಡುಗೆ ಮನೆಯ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಕೆಂಪೇಗೌಡ ನಗರದ ಲಕ್ಷ್ಮೀಪುರದಲ್ಲಿ ನಡೆದಿದೆ.

 

ಖಾಸಗಿ ಬ್ಯಾಂಕಿನ ಸಾಲ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಾಜಶೇಖರ್ (44) ಕೊಲೆಯಾದ ವ್ಯಕ್ತಿ. ಕೃತ್ಯವೆಸಗಿದ ಆರೋಪದ ಮೇಲೆ ಪತ್ನಿ ಮಾಲಾಶ್ರೀ (35) ಅವರನ್ನು ಪೊಲೀಸರು ಬಂಧಿಸಿದ್ದಾರೆ.

 

ಘಟನೆಯ ಹಿನ್ನೆಲೆ

ದಂಪತಿಗೆ ಮಕ್ಕಳಾಗಿರಲಿಲ್ಲ ಎಂಬ ವಿಚಾರವಾಗಿ ಮನೆಯಲ್ಲಿ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಹಗಲಿನಲ್ಲಿ ಪತ್ನಿಯನ್ನು ಚೆನ್ನಾಗಿಯೇ ನೋಡಿಕೊಳ್ಳುತ್ತಿದ್ದ ರಾಜಶೇಖರ್, ರಾತ್ರಿಯಾಗುತ್ತಿದ್ದಂತೆ ಮದ್ಯದ ನಶೆಯಲ್ಲಿ ಮನೆಗೆ ಬಂದು ಮಕ್ಕಳ ವಿಚಾರವನ್ನೇ ಮುಂದಿಟ್ಟುಕೊಂಡು ಜಗಳ ತೆಗೆದು ಹಲ್ಲೆ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ.

 

ನಿನ್ನೆ ರಾತ್ರಿಯೂ ಎಂದಿನಂತೆ ಕುಡಿದು ಬಂದಿದ್ದ ರಾಜಶೇಖರ್ ಪತ್ನಿಯೊಂದಿಗೆ ಜಗಳಕ್ಕಿಳಿದಿದ್ದಾರೆ. ಈ ವೇಳೆ ತೀವ್ರ ಆಕ್ರೋಶಗೊಂಡ ಮಾಲಾಶ್ರೀ, ಅಡುಗೆ ಮನೆಯಲ್ಲಿದ್ದ ಚಾಕುವಿನಿಂದ ಪತಿಯ ಎದೆಗೆ ಇರಿದಿದ್ದಾರೆ. ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ರಾಜಶೇಖರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

 

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಕೆಂಪೇಗೌಡ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin