Skip to main content

Police Roundup

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು: ಆತಂಕ ಪಡುವ ಅಗತ್ಯವಿಲ್ಲ, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್!

Share News

ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ನಟ ವಿನೋದ್ ಪ್ರಭಾಕರ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡುಬಂದಿದ್ದು, ಸದ್ಯ ಅವರು ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿದ್ದಾರೆ. ಅಭಿಮಾನಿಗಳು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ ಎಂದು ಚಿತ್ರತಂಡ ಹಾಗೂ ಕೌಟುಂಬಿಕ ಮೂಲಗಳು ಸ್ಪಷ್ಟಪಡಿಸಿವೆ.

 

​ತಮ್ಮ ಮುಂಬರುವ ಬಹುನಿರೀಕ್ಷಿತ “ಬಲರಾಮನ ದಿನಗಳು” ಚಿತ್ರದ ಸರಣಿ ಪ್ರಚಾರ ಕಾರ್ಯಕ್ರಮಗಳಲ್ಲಿ ನಟ ವಿನೋದ್ ಪ್ರಭಾಕರ್ ಅವರು ನಿರಂತರವಾಗಿ ತೊಡಗಿಸಿಕೊಂಡಿದ್ದರು. ಬಿಡುವಿಲ್ಲದ ಪ್ರಚಾರದ ಕಾರಣದಿಂದಾಗಿ ಅತಿಯಾದ ದಣಿವು ಮತ್ತು ಒತ್ತಡ ಉಂಟಾಗಿ, ಅವರಿಗೆ ಲೋ ಬಿಪಿ (ಕಡಿಮೆ ರಕ್ತದೊತ್ತಡ) ಕಾಣಿಸಿಕೊಂಡಿದೆ ಎನ್ನಲಾಗಿದೆ.

 

ಶನಿವಾರ ಮುಂಜಾನೆ ಆರೋಗ್ಯದಲ್ಲಿ ಸಣ್ಣ ಮಟ್ಟದ ಏರುಪೇರು ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ವಿನೋದ್ ಪ್ರಭಾಕರ್ ಅವರು, ತಮ್ಮ ಪತ್ನಿಯೊಂದಿಗೆ ತಕ್ಷಣವೇ ನಾಗರಭಾವಿಯ ಖಾಸಗಿ ಆಸ್ಪತ್ರೆಗೆ ಧಾವಿಸಿ ದಾಖಲಾಗಿದ್ದರು. ವೈದ್ಯರ ಸಲಹೆಯಂತೆ ಅಗತ್ಯವಿರುವ ಎಲ್ಲಾ ರೀತಿಯ ಆರೋಗ್ಯ ತಪಾಸಣೆಗಳನ್ನು (Health Check-up) ಮಾಡಿಸಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಅವರು ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದಾರೆ.

 

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿನೋದ್ ಪ್ರಭಾಕರ್ ಅವರು ಈಗ ಸಂಪೂರ್ಣ ಆರಾಮಾಗಿದ್ದು, ಇಂದು (ಭಾನುವಾರ) ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಬಳಿಕ ಸ್ವಲ್ಪ ಸಮಯ ವಿಶ್ರಾಂತಿ ಪಡೆದು, ನಾಳೆಯಿಂದಲೇ (ಸೋಮವಾರ) ಮತ್ತೆ ಎಂದಿನಂತೆ “ಬಲರಾಮನ ದಿನಗಳು” ಚಿತ್ರದ ಪ್ರಚಾರ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ವಿನೋದ್ ಪ್ರಭಾಕರ್ ಅಭಿನಯದ ಬಹುನಿರೀಕ್ಷಿತ “ಬಲರಾಮ” ಚಿತ್ರವು ಇದೇ ಜೂನ್ 26ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಲು ಸಿದ್ಧವಾಗಿದ್ದು, ಚಿತ್ರದ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ.

​ನೆಚ್ಚಿನ ನಟ ಶೀಘ್ರ ಗುಣಮುಖರಾಗಿ ಧಾವಿಸಿ ಬರುತ್ತಿರುವ ಸುದ್ದಿ ಕೇಳಿ ಅವರ ಅಭಿಮಾನಿ ಬಳಗ ನಿರಾಳವಾಗಿದೆ.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin