Skip to main content

Police Roundup

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐ(ಎಂ) ಧರಣಿ – ಸರ್ಕಾರದ ವಿರುದ್ಧ ಆಕ್ರೋಶ

Share News

ಆನೇಕಲ್: ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಸಿಪಿಐ(ಎಂ) ಪಕ್ಷದ ಕಾರ್ಯಕರ್ತರು ಪಟ್ಟಣದ ಪ್ರಮುಖ ಬಸ್‌ ನಿಲ್ದಾಣದ ಮುಂಭಾಗದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.

 

​ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ.ಎನ್‌. ಮಂಜುನಾಥ್‌, “ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬಗಳ ಶುಭ ಸಂದರ್ಭದಲ್ಲೇ ಸಾರ್ವಜನಿಕರಿಗೆ ರಾಜ್ಯ ಸರ್ಕಾರ ಬೆಲೆ ಏರಿಕೆಯ ‘ಕೊಡುಗೆ’ ನೀಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡವರ ಶೋಷಣೆ ಮಾಡುವಲ್ಲಿ ಒಂದೇ ನಾಣ್ಯದ ಎರಡು ಮುಖಗಳಂತೆ ವರ್ತಿಸುತ್ತಿವೆ,” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

 

​ಅಕ್ಕಿ, ಬೇಳೆ, ಅಡುಗೆ ಅನಿಲ, ಇಂಧನ ಮತ್ತು ಔಷಧ ಸೇರಿದಂತೆ ಪ್ರತಿಯೊಂದು ಅಗತ್ಯ ವಸ್ತುವಿನ ಬೆಲೆಯನ್ನು ಏಕಾಏಕಿ ಹೆಚ್ಚಿಸಲಾಗಿದೆ. ಕಾರ್ಪೋರೇಟ್‌ ಬಂಡವಾಳಶಾಹಿಗಳಿಗೆ ರಿಯಾಯಿತಿ ಹಾಗೂ ಪ್ರೋತ್ಸಾಹ ಧನ ನೀಡಲು ಬಡವರ ಮೇಲೆ ತೆರಿಗೆ ಮತ್ತು ದರ ಏರಿಕೆಯ ಹೊರೆ ಹೊರಿಸಲಾಗುತ್ತಿದೆ. “ಹಾಲಿನ ದರ ಹೆಚ್ಚಿಸಿ ರೈತರಿಗೆ ನೆರವಾಗುತ್ತಿದ್ದೇವೆ ಎಂಬ ನೆಪವೊಡ್ಡಿ ಸರ್ಕಾರವೇ ಲಾಭ ಮಾಡಿಕೊಳ್ಳಲು ಸಂಚು ರೂಪಿಸಿದೆ,” ಎಂದು ಅವರು ಆರೋಪಿಸಿದರು.

 

​ತಾಲ್ಲೂಕು ಕಾರ್ಯದರ್ಶಿ ಸುರೇಶ್‌ ಮಾತನಾಡಿ, “ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಹಾಗೂ ಪಾಸ್ ದರಗಳನ್ನು ಸರ್ಕಾರ ಹೆಚ್ಚಿಸಿರುವುದರಿಂದ ಬಡವರು, ಕಾರ್ಮಿಕರು ಮತ್ತು ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಬೆಲೆ ಏರಿಕೆಗೆ ತಕ್ಕಂತೆ ಕಾರ್ಮಿಕರ ಕನಿಷ್ಠ ವೇತನವನ್ನು ಕೂಡಲೇ ಹೆಚ್ಚಿಸಬೇಕು,” ಎಂದು ಒತ್ತಾಯಿಸಿದರು.

 

​ಪ್ರತಿಭಟನೆಯಲ್ಲಿ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಡಿ. ಮಹದೇಶ್, ಮುಖಂಡರಾದ ಬಾಲರಾಜ್‌, ಹನುಮಯ್ಯ, ನಾಗರಾಜು, ವೆಂಕಟೇಶ್, ಬೆಟ್ಟಪ್ಪ, ಅಬ್ಬಯ್ಯ, ಸೈಯದ್‌, ಲಕ್ಷ್ಮಣ್‌, ಮಾರೇಶ್‌ ಸೇರಿದಂತೆ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin