Skip to main content

Police Roundup

ಸರ್ಜಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಂತರರಾಜ್ಯ ಗಾಂಜಾ ಪೆಡ್ಲರ್ ಬಂಧನ, 1.1 ಕೆಜಿ ಗಾಂಜಾ ಜಪ್ತಿ!

Share News

ಆನೇಕಲ್/ಸರ್ಜಾಪುರ: ಪ್ರದೇಶದಲ್ಲಿ ಅಕ್ರಮ ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಸಮರ ಸಾರಿರುವ ಸರ್ಜಾಪುರ ಠಾಣೆ ಪೊಲೀಸರು, ಭರ್ಜರಿ ಕಾರ್ಯಾಚರಣೆ ನಡೆಸಿ ಅಂತರರಾಜ್ಯ ಗಾಂಜಾ ಪೆಡ್ಲರ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

​ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ತಿಂಡ್ಲು ಗ್ರಾಮದಲ್ಲಿ ಸಾರ್ವಜನಿಕರಿಗೆ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಬಿಹಾರ ಮೂಲದ ಲಲಿತ್ ಕುಮಾರ್ (26) ಬಂಧಿತ ಆರೋಪಿ.

 

​ಮಿಂಚಿನ ದಾಳಿ, 1.1 ಕೆಜಿ ಗಾಂಜಾ ಜಪ್ತಿ:

ತಿಂಡ್ಲು ಗ್ರಾಮದಲ್ಲಿ ಗಾಂಜಾ ಮಾರಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸುತ್ತಿದ್ದಂತೆ ಕಾರ್ಯಪ್ರವೃತ್ತರಾದ ಸರ್ಜಾಪುರ ಪೊಲೀಸ್ ಇನ್‌ಸ್ಪೆಕ್ಟರ್ ಮಹೇಂದ್ರ ಕುಮಾರ್ ಅವರ ನೇತೃತ್ವದ ವಿಶೇಷ ತಂಡವು ಸ್ಥಳದ ಮೇಲೆ ಮಿಂಚಿನ ದಾಳಿ ನಡೆಸಿದೆ. ಈ ವೇಳೆ ಸಿಕ್ಕಿಬಿದ್ದ ಆರೋಪಿಯಿಂದ ಬರೋಬ್ಬರಿ 1 ಕೆಜಿ 100 ಗ್ರಾಂ ತೂಕದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

 

​ನ್ಯಾಯಾಂಗ ಬಂಧನಕ್ಕೆ:

ಘಟನೆಗೆ ಸಂಬಂಧಿಸಿದಂತೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಾದಕ ವಸ್ತುಗಳ ಅಕ್ರಮ ಜಾಲವನ್ನು ಸಂಪೂರ್ಣವಾಗಿ ಬೇರುಸಹಿತ ಕಿತ್ತೊಗೆಯಲು ಕಠಿಣ ಕ್ರಮ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin