Skip to main content

Police Roundup

ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ: ಚಿಕ್ಕಹಾಗಡೆಯಲ್ಲಿ ಸಂಭ್ರಮ

Share News

ಆನೇಕಲ್: ಆನೇಕಲ್ ತಾಲೂಕಿನ ಬ್ಯಾಗಡದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಹಾಗಡೆ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸಮವಸ್ತ್ರ, ಶಾಲಾ ಬ್ಯಾಗ್ ಹಾಗೂ ಅಗತ್ಯ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಹಾಗೂ ಶೈಕ್ಷಣಿಕ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

 

​ದಾನಿಗಳ ಪ್ರೋತ್ಸಾಹ

ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ತಿಲಕ್ ಕುಮಾರ್ ಗೌಡ ಹಾಗೂ ಗುತ್ತಿಗೆದಾರ ಆನಂದ್ ಅವರ ನೇತೃತ್ವದಲ್ಲಿ ಈ ಸಮಾಜಮುಖಿ ಕಾರ್ಯ ನಡೆದಿದೆ.

 

​”ಖಾಸಗಿ ಶಾಲೆಗಳಿಗೆ ಸವಾಲಾಗಿ ಸರ್ಕಾರಿ ಶಾಲೆಯ ಮಕ್ಕಳೂ ಗುಣಮಟ್ಟದ ಶಿಕ್ಷಣ ಪಡೆಯಬೇಕು. ಗ್ರಾಮೀಣ ಭಾಗದ ಶಾಲೆಗಳನ್ನು ಉಳಿಸುವುದು ನಮ್ಮ ಜವಾಬ್ದಾರಿಯಾಗಿದ್ದು, ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು ಎಂಬ ಉದ್ದೇಶದಿಂದ ಈ ನೆರವು ನೀಡಲಾಗಿದೆ” ಎಂದು ಅವರು ತಿಳಿಸಿದರು.

 

​ಗ್ರಾಮಸ್ಥರ ಶ್ಲಾಘನೆ

ದಾನಿಗಳ ಈ ಸಾಮಾಜಿಕ ಕಾಳಜಿಗೆ ಗ್ರಾಮಸ್ಥರು, ಪೋಷಕರು ಹಾಗೂ ಶಿಕ್ಷಕ ವೃಂದ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಕೇಬಲ್ ಬಾಬು, ಶಾಲೆಯ ಮುಖ್ಯಶಿಕ್ಷಕರು, ಶಿಕ್ಷಕ ವೃಂದ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin