Skip to main content

Police Roundup

Author: Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

ಕುಖ್ಯಾತ ಅಂತರರಾಜ್ಯ ಕಳ್ಳನ ಬಂಧನ – ಲಕ್ಷಾಂತರ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ವಶ

ಶಿಡ್ಲಘಟ್ಟ: ನಗರದಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ ಒಂದು ವಾರದ ಅವಧಿಯಲ್ಲಿ ಕಾರ್ಯಾಚರಣೆ ನಡೆಸಿದ ಶಿಡ್ಲಘಟ್ಟ ನಗರ ಪೊಲೀಸರು, ಕುಖ್ಯಾತ ಅಂತರರಾಜ್ಯ ಕಳ್ಳನನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.   ​ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಧರ್ಮಾವರಂ ಮೂಲದ ಜಿ.ರಾಮಕೃಷ್ಣ (60) ಬಂಧಿತ ಆರೋಪಿ. ಈತ ಕರ್ನಾಟಕ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 11 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿಯಾಗಿದ್ದಾನೆ. ​ ಕಳೆದ ಜುಲೈ 22,…

Read More

ಅವಲಹಳ್ಳಿ: ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ನಾಲ್ವರು ಆರೋಪಿಗಳ ಬಂಧನ, 1.14 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ

ಅವಲಹಳ್ಳಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಎರಡು ಪ್ರತ್ಯೇಕ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಅವಲಹಳ್ಳಿ ಪೊಲೀಸರು, ನಾಲ್ವರು ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.   ​ಬಂಧಿತ ಆರೋಪಿಗಳಿಂದ ಒಟ್ಟು 815.4 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಈ ಚಿನ್ನಾಭರಣಗಳ ಒಟ್ಟು ಅಂದಾಜು ಮೌಲ್ಯ ₹1,14,10,000/- (ಒಂದು ಕೋಟಿ ಹದಿನಾಲ್ಕು ಲಕ್ಷ ಹತ್ತು ಸಾವಿರ ರೂಪಾಯಿ) ಎಂದು ಅಂದಾಜಿಸಲಾಗಿದೆ.   ​ಅಷ್ಟೇ ಅಲ್ಲದೆ, ಆರೋಪಿಗಳ ವಶದಲ್ಲಿದ್ದ ₹9,50,000/- (ಒಂಬತ್ತು ಲಕ್ಷ ಐವತ್ತು ಸಾವಿರ…

Read More

Solverwp- WordPress Theme and Plugin