ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News
ಮಂಡ್ಯ: ಆರೋಪಿಯೊಬ್ಬನಿಗೆ ಠಾಣಾ ಜಾಮೀನು (ಸ್ಟೇಷನ್ ಬೇಲ್) ನೀಡಲು ಭ್ರಷ್ಟಾಚಾರದ ದಾರಿ ಹಿಡಿದಿದ್ದ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯ ಸಹಾಯಕ ಸಬ್‌ಇನ್‌ಸ್ಪೆಕ್ಟರ್ (ಎಎಸ್‌ಐ) ಶಿವಕುಮಾರ್ ಅವರು ₹10,000 ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಳವಳ್ಳಿಯ ನಿವಾಸಿಯಾದ ರಾಜೇಗೌಡ ಎಂಬುವವರ ವಿರುದ್ಧ ಇತ್ತೀಚೆಗೆ ಗಲಾಟೆ ಪ್ರಕರಣವೊಂದು ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆಯಲ್ಲೇ ಜಾಮೀನು ನೀಡಿ, ಕೇಸ್ ಇತ್ಯರ್ಥ ಪಡಿಸಿಕೊಡಲು ಎಎಸ್‌ಐ ಶಿವಕುಮಾರ್ ಅವರು ₹10,000 ಲಂಚ ನೀಡುವಂತೆ ಪಟ್ಟು ಹಿಡಿದಿದ್ದರು ಎನ್ನಲಾಗಿದೆ. …
ಆನೇಕಲ್: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಒಬ್ಬ ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆಯೇ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದಾಗ, ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿ ಆತನನ್ನು ಹೆಡೆಮುರಿ ಕಟ್ಟಿರುವ ಘಟನೆ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಜೀವ (19) ಗುಂಡೇಟು ತಿಂದ ಆರೋಪಿಯಾಗಿದ್ದಾನೆ. ಹೆಬ್ಬಗೋಡಿ ಇನ್ಸ್‌ಪೆಕ್ಟರ್ ಸೋಮಶೇಖರ್ ನೇತೃತ್ವದ ಪೊಲೀಸ್ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ. ಕೊಲೆ, ಸುಲಿಗೆ, ದರೋಡೆ ಸೇರಿದಂತೆ ಹಲವು ಕ್ರಿಮಿನಲ್…