ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News
ಬಾಗಲಕೋಟೆ: ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದ ವೇಳೆಯಲ್ಲೇ ಕೊಠಡಿಯ ಮೇಲ್ಛಾವಣಿಯ ಕಾಂಕ್ರೀಟ್ ಕುಸಿದು ಬಿದ್ದು, ಅದೃಷ್ಟವಶಾತ್ ವಿದ್ಯಾರ್ಥಿಗಳು ದೊಡ್ಡ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬಾಗಲಕೋಟೆ ತಾಲೂಕಿನ ಮುಗಳೂಳ್ಳಿ ತಾಂಡಾದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಸ್ಥಳೀಯ ವೈದ್ಯರಿಂದ ಚಿಕಿತ್ಸೆ ಕೊಡಿಸಲಾಗಿದೆ. ಘಟನೆಯ ವಿವರ: ವಿದ್ಯಾರ್ಥಿಗಳು ತರಗತಿಯಲ್ಲಿ ಕುಳಿತು ಪಾಠ ಕೇಳುತ್ತಿದ್ದ ವೇಳೆ, ಬೆಂಚ್‌ಗಳ ಮೇಲೆ ಮೇಲ್ಛಾವಣಿಯ ಸಿಮೆಂಟ್ ಕಾಂಕ್ರೀಟ್ ಏಕಾಏಕಿ ಉದುರಿ ಬಿದ್ದಿದೆ. ಕಟ್ಟಡವು ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು,…
ಶಿವಮೊಗ್ಗ: ನಗರದ ಮಂಡ್ಲಿ ಭಾಗದ ಪೇಪರ್ ಪ್ಯಾಕೇಜಿಂಗ್ ಕಾರ್ಖಾನೆಯೊಂದರ ಪಕ್ಕದಲ್ಲಿದ್ದ ಸುಮಾರು ಏಳುವರೆ ಅಡಿ ಉದ್ದದ ದೈತ್ಯ ಹೆಬ್ಬಾವನ್ನು ಉರಗ ಪ್ರೇಮಿ ‘ಸ್ನೇಕ್ ಕಿರಣ್’ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ಕಾರ್ಖಾನೆ ಪಕ್ಕದ ಪ್ಲಾಸ್ಟಿಕ್ ಚೀಲಗಳ ರಾಶಿಯಲ್ಲಿ ಮಲಗಿದ್ದ ಸುಮಾರು 10 ಕೆಜಿಗೂ ಅಧಿಕ ತೂಕದ ಈ ಭಾರಿ ಪ್ರಮಾಣದ ಹೆಬ್ಬಾವನ್ನು ಕಂಡು ಸ್ಥಳೀಯರು ಆತಂಕಗೊಂಡಿದ್ದರು. ತಕ್ಷಣವೇ ಉರಗ ಪ್ರೇಮಿ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್,…