ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News
ಬೆಂಗಳೂರು ಮಹಾನಗರದ ಘನತ್ಯಾಜ್ಯ ವಿಲೇವಾರಿ ಹೆಸರಿನಲ್ಲಿ ಬರೋಬ್ಬರಿ 39,000 ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಆರೋಪಕ್ಕೆ ರಾಜ್ಯ ಸರ್ಕಾರ ತಿರುಗೇಟು ನೀಡಿದೆ. “ನಿಮ್ಮ ಬಳಿ ಸೂಕ್ತ ಸಾಕ್ಷ್ಯಗಳಿದ್ದರೆ ಅದನ್ನು ಮೊದಲು ಜನರೆದುರು ಬಹಿರಂಗಪಡಿಸಿ” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, “ರಾಜ್ಯಪಾಲರ ಬಳಿ ಹೋಗುವುದು ಎಲ್ಲದಕ್ಕೂ ಪರಿಹಾರವಲ್ಲ. ನಿಮ್ಮಲ್ಲಿರುವ ಸಾಕ್ಷ್ಯಗಳನ್ನು ಜನರಿಗೆ…
ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪ್ರತ್ಯೇಕ ಎರಡು ಕಾರ್ಯಾಚರಣೆಗಳನ್ನು ನಡೆಸಿ ಬರೋಬ್ಬರಿ 3.12 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಚಿನ್ನ ಹಾಗೂ ಮಾದಕ ವಸ್ತುವನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ವಿದೇಶಗಳಿಂದ ಬೆಂಗಳೂರಿಗೆ ಬಂದಿಳಿದ ಇಬ್ಬರು ಪ್ರಯಾಣಿಕರನ್ನು ತಪಾಸಣೆ ನಡೆಸಿದಾಗ ಈ ಕಳ್ಳಸಾಗಣೆ ಜಾಲ ಬಯಲಾಗಿದೆ. ದುಬೈನಿಂದ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕನೊಬ್ಬನ ನಡವಳಿಕೆಯ ಮೇಲೆ ಅನುಮಾನಗೊಂಡ ಅಧಿಕಾರಿಗಳು ಆತನನ್ನು ತಡೆದು ತೀವ್ರ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ…