ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News
ಮೂಡಲಗಿ: ವಾಟ್ಸಾಪ್ ಸ್ಟೇಟಸ್‌ಗೆ ಫೋಟೋ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿ ಗ್ರಾಮದಲ್ಲಿ ನಡೆದಿದೆ. ಕಲ್ಲೋಳಿ ಗ್ರಾಮದ ರಮೇಶ ಬಂಟ್ರೋಳಿ ಹತ್ಯೆಯಾದ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಾದ ಬನಪ್ಪ ಒಡೆಯರ್ ಹಾಗೂ ಆತನ ಪತ್ನಿ ಲಕ್ಷ್ಮೀ ಒಡೆಯರ್ ಎಂಬ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿವರ: ರಮೇಶ ಹಾಗೂ ಲಕ್ಷ್ಮೀ ಒಡೆಯರ್ ಜೊತೆಯಾಗಿ ಫೋಟೋ ತೆಗೆಸಿಕೊಂಡಿದ್ದರೆನ್ನಲಾಗಿದೆ. ಈ ಫೋಟೋವನ್ನು ರಮೇಶ…
ಚಿಕ್ಕಬಳ್ಳಾಪುರ: ಜಮೀನಿನ ಖಾತೆ ಮಾಡಿಕೊಡಲು ಬೃಹತ್ ಮೊತ್ತದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಂಗಮಕೋಟೆ ನಾಡಕಚೇರಿಯ ಸೆಕ್ರೆಟರಿ ಮೋಹನ್ ಕುಮಾರ್ ಎಂಬುವವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆರೋಪಿ ಸೆಕ್ರೆಟರಿ ಮೋಹನ್ ಕುಮಾರ್, ಜಮೀನಿನ ಖಾತೆ ಬದಲಾವಣೆ ಮಾಡಿಕೊಡಲು ರೈತ ಬೈರೇಗೌಡ ಎಂಬುವವರಿಂದ ಒಟ್ಟು 7 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಲ್ಲದೆ, ಕೆಲಸ ಆರಂಭಿಸಲು 3 ಲಕ್ಷ ರೂಪಾಯಿ ಮುಂಗಡ ಹಣ ನೀಡುವಂತೆ ಒತ್ತಾಯಿಸಿದ್ದರು ಎನ್ನಲಾಗಿದೆ. ಈ ಕುರಿತು ಸಂತ್ರಸ್ತ ರೈತ ಬೈರೇಗೌಡ…