ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News
ಚಿಕ್ಕಬಳ್ಳಾಪುರ: ಮದುವೆಯಾಗುವುದಾಗಿ ನಂಬಿಸಿ ವಿಧವೆ ಮಹಿಳೆಯೊಬ್ಬರಿಗೆ ನಂಬಿಕೆದ್ರೋಹವೆಸಗಿ, ಲೈಂಗಿಕ ಶೋಷಣೆ ನಡೆಸಿದ ಆರೋಪ ಕೆಎಸ್‌ಆರ್‌ಟಿಸಿ (KSRTC) ಬಸ್ ಕಂಡಕ್ಟರ್ ವಿರುದ್ಧ ಕೇಳಿಬಂದಿದೆ. ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ. ಬಾಗೇಪಲ್ಲಿ ತಾಲೂಕಿನ ಗುಂಡ್ಲಪಲ್ಲಿ ಗ್ರಾಮದ ಶ್ರೀನಾಥ್ (37) ಪ್ರಕರಣದ ಆರೋಪಿಯಾಗಿದ್ದಾನೆ. ಪರಿಚಯ ಮತ್ತು ಶೋಷಣೆ: ಪತಿಯನ್ನು ಕಳೆದುಕೊಂಡಿದ್ದ ಸಂತ್ರಸ್ತೆ, ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸ್ಟಾಫ್ ನರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು….
ನೆಲಮಂಗಲ: ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕುಖ್ಯಾತ ಸುಲಿಗೆಕೋರ ಹಾಗೂ ಸರಗಳ್ಳತನ ಆರೋಪಿ ಜಯಂತ್ ಎಂಬಾತ ನಿಗೂಢವಾಗಿ ಮೃತಪಟ್ಟಿದ್ದು, ಆತನ ಮೃತದೇಹ ದೊಡ್ಡೇರಿ ಕೆರೆಯಲ್ಲಿ ಪತ್ತೆಯಾಗಿದೆ. ಈ ಘಟನೆಯು ಸ್ಥಳೀಯವಾಗಿ ಭಾರೀ ಸಂಚಲನ ಮೂಡಿಸಿದ್ದು, ಸಾರ್ವಜನಿಕರು ಪೊಲೀಸರ ವಿರುದ್ಧ ಲಾಕಪ್ ಡೆತ್ ಆರೋಪ ಹೊರಿಸಿದ್ದಾರೆ. ಘಟನೆಯ ವಿವರ: ಎರಡು ದಿನಗಳ ಹಿಂದೆ ಸರಗಳ್ಳತನದ ಆರೋಪದ ಮೇಲೆ ಜಯಂತ್ ಸೇರಿದಂತೆ ಇಬ್ಬರನ್ನು ಸಾರ್ವಜನಿಕರು ರೆಡ್‌ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಆ ಸಂದರ್ಭದಲ್ಲಿ ಗಾಯಗೊಂಡಿದ್ದ ಜಯಂತ್ನನ್ನು…