Skip to main content

Police Roundup

Author: Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

KPSC ಅಕ್ರಮ ನೇಮಕಾತಿ ಪ್ರಕರಣ: ಇತಿಹಾಸದಲ್ಲೇ ಮೊದಲ ಬಾರಿಗೆ 21 ಸ್ಥಳಗಳ ಮೇಲೆ ಇಡಿ ಮೆಗಾ ರೇಡ್!

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ನಡೆದಿದೆ ಎನ್ನಲಾದ ಬೃಹತ್ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, KPSC ಇತಿಹಾಸದಲ್ಲೇ ಮೊದಲ ಬಾರಿಗೆ ಇಡಿ ಅಧಿಕಾರಿಗಳು ರಾಜ್ಯಾದ್ಯಂತ ಮೆಗಾ ರೇಡ್ ನಡೆಸಿದ್ದಾರೆ.   ಬೆಂಗಳೂರಿನಲ್ಲಿರುವ ಕೆಪಿಎಸ್‌ಸಿ ಕೇಂದ್ರ ಕಚೇರಿ, ಅಮಾನತುಗೊಂಡಿರುವ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ನಿವಾಸ, ಹಾಲಿ ಸದಸ್ಯೆ ಶಾಂತಾ ಹೊಸಮನಿ, ಮಧ್ಯವರ್ತಿಗಳು, ಪತ್ರಿಕೆ ಡಿಜಿಟಲ್ ಮೌಲ್ಯಮಾಪನ ಸಂಸ್ಥೆಯಾದ M/s ಎಡುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಕಚೇರಿ ಹಾಗೂ ಆಯ್ಕೆಯಾದ…

Read More

ತದಡಿ ಬಂದರಿನಲ್ಲಿ ಮತ್ತೊಂದು ಬೋಟ್ ಮುಳುಗಡೆ: ನಾಲ್ವರು ಮೀನುಗಾರರ ರೋಚಕ ರಕ್ಷಣೆ!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ತದಡಿ ಬಂದರಿನಲ್ಲಿ ಹೂಳು ಹಾಗೂ ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಮೀನುಗಾರಿಕಾ ಬೋಟ್‌ವೊಂದು ಮುಳುಗಡೆಯಾಗಿರುವ ಘಟನೆ ಮಂಗಳವಾರ ನಡೆದಿದೆ. ಅದೃಷ್ಟವಶಾತ್ ಬೋಟ್‌ನಲ್ಲಿದ್ದ ನಾಲ್ವರು ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ.   ​ಸುರೇಂದ್ರ ಹರಿಕಂತ್ರ ಅವರಿಗೆ ಸೇರಿದ ‘ಲಕ್ಷ್ಮೀ ಕೃಪಾ’ ಹೆಸರಿನ ಬೋಟ್ ಮೀನುಗಾರಿಕೆಗೆ ತೆರಳಿದ್ದಾಗ ತದಡಿ ಬಂದರಿನ ಅಳವೆಯಲ್ಲಿ ತುಂಬಿಕೊಂಡಿದ್ದ ಹೂಳಿನಲ್ಲಿ ಸಿಲುಕಿಕೊಂಡಿದೆ. ಈ ವೇಳೆ ಅಪ್ಪಳಿಸಿದ ಭಾರೀ ಅಲೆಗಳ ರಭಸಕ್ಕೆ ಬೋಟ್‌ನ ತಳಭಾಗ ಸಂಪೂರ್ಣ ಹಾನಿಗೊಳಗಾಗಿ…

Read More

Solverwp- WordPress Theme and Plugin