ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News
ಹೊಸಕೋಟೆ: ಕೆಲಸ ನೀಡಿ ಆಸರೆ ಕೊಟ್ಟ ಮನೆಗೇ ಕನ್ನ ಹಾಕಿ, ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿರುವ ಆಘಾತಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹೊರವಲಯದ ಖಾಸಗಿ ವಿಲ್ಲಾದಲ್ಲಿ ನಡೆದಿದೆ. ಕಳೆದ ಎರಡು ತಿಂಗಳ ಹಿಂದಷ್ಟೇ ನೇಪಾಳ ಮೂಲದ ವ್ಯಕ್ತಿಯೊಬ್ಬ ಈ ಖಾಸಗಿ ವಿಲ್ಲಾಗೆ ಭದ್ರತಾ ಸಿಬ್ಬಂದಿಯಾಗಿ (ಸೆಕ್ಯೂರಿಟಿ ಗಾರ್ಡ್) ಕೆಲಸಕ್ಕೆ ಸೇರಿಕೊಂಡಿದ್ದ. ತರುವಾಯ, ತನ್ನ ಪತ್ನಿಗೂ ಕೆಲಸ ಕೊಡಿಸುವಂತೆ ಮನೆ ಮಾಲೀಕರಲ್ಲಿ ವಿನಂತಿಸಿಕೊಂಡಿದ್ದ. ದಂಪತಿಯ ಬಡತನ ಕಂಡು ಕರುಣೆ ತೋರಿದ ಮಾಲೀಕರು…
ಆನೇಕಲ್: ಸರ್ಕಾರಿ ಗೋದಾಮಿನಲ್ಲಿ ಬಡವರಿಗಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ಕಿ, ಗೋಧಿ ಹಾಗೂ ರಾಗಿಯನ್ನು ಅಕ್ರಮವಾಗಿ ಹೊರಗೆ ಸಾಗಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಿರುವ ಭಾರಿ ಹಗರಣ ಆನೇಕಲ್ ತಾಲ್ಲೂಕಿನ ರಾಮಕೃಷ್ಣಾಪುರದಲ್ಲಿ ಬೆಳಕಿಗೆ ಬಂದಿದೆ. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ (KFCSC) ಗೋದಾಮಿನಲ್ಲಿ ಈ ಬೃಹತ್ ಅಕ್ರಮ ನಡೆದಿದ್ದು, ಸುಮಾರು 86.65 ಲಕ್ಷ ರೂ. ಮೌಲ್ಯದ ಭಾರಿ ಪ್ರಮಾಣದ ಆಹಾರ ಧಾನ್ಯ ನಾಪತ್ತೆಯಾಗಿದೆ. ಐವರ ವಿರುದ್ಧ ಎಫ್‌ಐಆರ್: ಪ್ರಕರಣಕ್ಕೆ ಸಂಬಂಧಿಸಿದಂತೆ ಗೋದಾಮಿನ…