ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News
ಶಿವಮೊಗ್ಗ: ಜಿಲ್ಲೆಯ ಚೋರಡಿ ಸೇತುವೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸಿಗಂದೂರು ಚೌಡೇಶ್ವರಿ ದೇವಿ ದರ್ಶನಕ್ಕೆ ಹೊರಟಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಆರು ಮಂದಿ ಗಾಯಗೊಂಡಿದ್ದಾರೆ. ಘಟನೆಯ ವಿವರ: ಬೆಂಗಳೂರಿನಿಂದ ಆರು ಮಂದಿ ಸ್ನೇಹಿತರು ಒಂದೇ ಕಾರಿನಲ್ಲಿ ಸಿಗಂದೂರು ದೇವಸ್ಥಾನದತ್ತ ಪ್ರಯಾಣಿಸುತ್ತಿದ್ದರು. ಶಿವಮೊಗ್ಗ ಸಮೀಪದ ಚೋರಡಿ ಬ್ರಿಡ್ಜ್ ಬಳಿ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಡಿವೈಡರ್‌ಗೆ ಭೀಕರವಾಗಿ ಡಿಕ್ಕಿ ಹೊಡೆದು, ರಸ್ತೆಯಲ್ಲೇ ಮೂರು ಬಾರಿ ಪಲ್ಟಿಯಾಗಿದೆ. …
ಬೆಂಗಳೂರು: ನಗರದಲ್ಲಿ ಆಂತರಿಕ ಭದ್ರತೆ ಮತ್ತು ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಅಕ್ರಮ ವಲಸಿಗರ ಪತ್ತೆಗೆ ಕೈಗೊಂಡಿದ್ದ ‘ಆಪರೇಷನ್ ಮುಕ್ತ’ ವಿಶೇಷ ಕಾರ್ಯಾಚರಣೆಯಲ್ಲಿ 53 ಬಾಂಗ್ಲಾದೇಶಿ ಅಕ್ರಮ ವಲಸಿಗರನ್ನು ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಹಾಗೂ ವೈಟ್‌ಫೀಲ್ಡ್ ವಿಭಾಗಗಳಲ್ಲಿ ಶನಿವಾರ ನಡೆಸಿದ ಬೃಹತ್ ದಾಳಿಯಲ್ಲಿ ಅಂದಾಜು 3,000 ಶಂಕಿತರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಲಾಗಿತ್ತು. ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ನೆಲೆಸಿದ್ದ ವೈಟ್‌ಫೀಲ್ಡ್ ವಿಭಾಗದ 38 ಹಾಗೂ ಎಲೆಕ್ಟ್ರಾನಿಕ್ ಸಿಟಿ ವಿಭಾಗದ 15 ಬಾಂಗ್ಲಾದೇಶಿಯರನ್ನು ಬಂಧಿಸಿ, ನೆಲಮಂಗಲದ ಸೊಂಡೆಕೊಪ್ಪ…