ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News
ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ, ಮೃತದೇಹವನ್ನು ಬೆಡ್ ಶೀಟ್‌ನಲ್ಲಿ ಸುತ್ತಿಟ್ಟು ಪರಾರಿಯಾಗಿದ್ದ ಗಂಡನನ್ನು ಕುಂಬಳಗೋಡು ಠಾಣೆ ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಧೀರಜ್ ಕುಮಾರ್ (೨೪) ಎಂದು ಗುರುತಿಸಲಾಗಿದೆ. ಈತನ ಹೆಂಡತಿ ರೀಮಾಕುಮಾರಿ (೨೧) ಕೊಲೆಯಾದ ದುರ್ದೈವಿ. ಬಿಹಾರ ಮೂಲದ ಈ ಜೋಡಿ ಪರಸ್ಪರ ಪ್ರೀತಿಸುತ್ತಿದ್ದು, ಮನೆಯವರ ವಿರೋಧದ ನಡುವೆಯೂ ಮನೆ ಬಿಟ್ಟು ಬಂದಿದ್ದರು. ಸುಮಾರು ೧೦ ತಿಂಗಳ ಹಿಂದೆ ಬೆಂಗಳೂರಿಗೆ ಆಗಮಿಸಿದ್ದ ಇಬ್ಬರೂ, ಕುಟುಂಬದವರಿಗೆ ತಿಳಿಸದೆ…
ತುಮಕೂರು: ಅಕ್ರಮ ಸಂಬಂಧಕ್ಕೆ ಅಡ್ಡಬಂದ ಸ್ವಂತ ತಮ್ಮನನ್ನೇ ಅತ್ಯಂತ ಬ್ರೂಟಲ್ ಆಗಿ ಕೊಲೆ ಮಾಡಿ, ನಿರ್ಮಾಣ ಹಂತದ ಮನೆಯ ಪಾಯದಲ್ಲಿ ಶವ ಹೂತಿಟ್ಟಿದ್ದ ಪಾಪಿ ಅಣ್ಣನಿಗೆ ತುಮಕೂರಿನ ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಆರೋಪಿ ರಾಜಾನಾಯ್ಕ್ (೪೫) ಶಿಕ್ಷೆಗೆ ಗುರಿಯಾದ ವ್ಯಕ್ತಿ. ದೃಶ್ಯ ಸಿನಿಮಾ ಮಾದರಿಯಲ್ಲಿ ನಡೆದಿದ್ದ ಈ ಭೀಕರ ಕೊಲೆ ಪ್ರಕರಣ ಸಾರ್ವಜನಿಕ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿತ್ತು. ಶಿರಾ ತಾಲೂಕಿನಲ್ಲಿ ೨೦೨೨ರ…