ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News
ಶಿವಮೊಗ್ಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್ 10 ರಂದು ಜಿಲ್ಲಾದ್ಯಂತ ‘ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, 1 ರಿಂದ 19 ವರ್ಷದೊಳಗಿನ ಎಲ್ಲ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ‘ರಾಷ್ಟ್ರೀಯ ಜಂತು ಹುಳು ನಿವಾರಣೆ ದಿನ’ದ ಪೂರ್ವಭಾವಿ ಹಾಗೂ ‘ರಾಷ್ಟ್ರೀಯ ವಾಹಕಗಳಿಂದ ಹರಡುವ ರೋಗ ನಿಯಂತ್ರಣ ಕಾರ್ಯಕ್ರಮ’ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. …
ಹುಣಸೂರು: ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಲಕ್ಷಾಂತರ ರೂಪಾಯಿ ಲಂಚ ಪಡೆಯುತ್ತಿದ್ದ ಹುಣಸೂರು ಉಪವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಸಿ ಕಾವ್ಯಾರಾಣಿ ಹಾಗೂ ಅವರ ಕಚೇರಿಯ ಗುಮಾಸ್ತ ಶಿವಕುಮಾರ್ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಎಚ್.ಡಿ. ಕೋಟೆ ತಾಲೂಕಿನಲ್ಲಿರುವ 4.5 ಎಕರೆ ಜಮೀನಿನ ಕಂದಾಯ ಮೇಲ್ಮನವಿಯನ್ನು ಇತ್ಯರ್ಥಪಡಿಸಿಕೊಡಲು ಎಸಿ ಕಾವ್ಯಾರಾಣಿ ಅವರು ಒಟ್ಟು 10.50 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ…