Skip to main content

Police Roundup

ಲೋಕಾಯುಕ್ತ ಬಲೆಗೆ ಎ.ಸಿ. ಕಚೇರಿ ಸಿಬ್ಬಂದಿ: ಲಂಚ ಸ್ವೀಕರಿಸುವಾಗ ರೆಡ್‌ಹ್ಯಾಂಡ್ ಆಗಿ ಸೆರೆ

Share News

ಬೆಳಗಾವಿ: ಸರ್ಕಾರಿ ಕೆಲಸ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಲ್ಲಿನ ಉಪವಿಭಾಗಾಧಿಕಾರಿ (AC) ಕಚೇರಿಯ ದ್ವಿತೀಯ ದರ್ಜೆ ಸಹಾಯಕ (SDA) ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕಚೇರಿಯ ಸಿಬ್ಬಂದಿ ಪದ್ಮಾಕರ್ ಪಾಟೀಲ್ ಲಂಚ ಸ್ವೀಕರಿಸುವಾಗಲೇ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

 

ಪ್ರಕರಣದ ವಿವರ:

37 ಪ್ರಕರಣಗಳನ್ನು ಉಪವಿಭಾಗಾಧಿಕಾರಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿಕೊಡಲು ಪದ್ಮಾಕರ್ ಪಾಟೀಲ್ ಅವರು ₹30 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಲಂಚ ನೀಡಲು ಇಷ್ಟವಿಲ್ಲದ ದೂರುದಾರ ಶುಭಂ ಅಪ್ಪಾರಾವ್ ಅವರು ಈ ಕುರಿತು ಬೆಳಗಾವಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

 

ದೂರಿನ ಆಧಾರದ ಮೇಲೆ ಕಾರ್ಯಾಚರಣೆಗೆ ಇಳಿದ ಲೋಕಾಯುಕ್ತ ಅಧಿಕಾರಿಗಳು, ಮುಂಗಡವಾಗಿ ₹2 ಸಾವಿರ ಲಂಚದ ಹಣವನ್ನು ಕಚೇರಿಯಲ್ಲೇ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿ ಪದ್ಮಾಕರ್ ಪಾಟೀಲ್ ಅವರನ್ನು ಹಣದ ಸಮೇತ ವಶಕ್ಕೆ ಪಡೆದಿದ್ದಾರೆ.

 

ಲೋಕಾಯುಕ್ತ ಎಸ್‌ಪಿ ಪ್ರಸನ್ನ ದೇಸಾಯಿ ಅವರ ಮಾರ್ಗದರ್ಶನದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆದಿದ್ದು, ಆರೋಪಿತ ಸಿಬ್ಬಂದಿಯ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಮುಂದಿನ ತನಿಖೆ ಕೈಗೊಂಡಿದ್ದಾರೆ.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin