Skip to main content

Police Roundup

ಬೆಂಗಳೂರು: 20ಕ್ಕೂ ಹೆಚ್ಚು ಮಹಿಳೆಯರ ಅಶ್ಲೀಲ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್; ಮಕ್ಕಳ ಆಯೋಗದ ಸಮಿತಿ ಸದಸ್ಯನ ಬಂಧನ

Share News

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಮಹಿಳೆಯರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ಅದನ್ನು ವಿಡಿಯೋ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕಿರಾತಕನನ್ನು ರಾಜರಾಜೇಶ್ವರಿ ನಗರ (ಆರ್.ಆರ್. ನಗರ) ಪೊಲೀಸರು ಬಂಧಿಸಿದ್ದಾರೆ.

 

​ಬಂಧಿತ ಆರೋಪಿಯನ್ನು ರಾಮನಗರ ಜಿಲ್ಲಾ ಮಕ್ಕಳ ಆಯೋಗದ ಸಮಿತಿ ಸದಸ್ಯ ಚಂದ್ರೇಗೌಡ ಎಂದು ಗುರುತಿಸಲಾಗಿದೆ. ಈತನ ಮೊಬೈಲ್ ಪರಿಶೀಲಿಸಿದಾಗ ಸುಮಾರು 20ಕ್ಕೂ ಹೆಚ್ಚು ಮಹಿಳೆಯರ ಜೊತೆಗಿನ ಆಕ್ಷೇಪಾರ್ಹ ವಿಡಿಯೋಗಳು ಪತ್ತೆಯಾಗಿದ್ದು, ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ.

 

ಗಂಡನಿಂದ ದೂರವಾಗಿದ್ದ ಸಂತ್ರಸ್ತ ಮಹಿಳೆಯೊಬ್ಬರಿಗೆ ಆರೋಪಿ ಚಂದ್ರೇಗೌಡ ಪರಿಚಯವಾಗಿದ್ದ. ತನಗೂ ವಿಚ್ಛೇದನವಾಗಿದೆ ಎಂದು ಸುಳ್ಳು ಹೇಳಿ, ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿದ್ದ. ಈ ನಂಬಿಕೆಯನ್ನು ಬಳಸಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ, ಆ ದೃಶ್ಯಗಳನ್ನು ಗುಟ್ಟಾಗಿ ವಿಡಿಯೋ ಮಾಡಿಕೊಂಡಿದ್ದ.

 

ನಂತರ ತನ್ನ ಅಸಲಿ ರೂಪ ತೋರಿಸಿದ ಆರೋಪಿ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿ ಮಹಿಳೆಯಿಂದ 5 ಲಕ್ಷ ರೂಪಾಯಿ ಹಣವನ್ನು ವಸೂಲಿ ಮಾಡಿದ್ದಾನೆ. ಆರೋಪಿಯ ಕಿರುಕುಳ ತಾಳಲಾರದೆ ಸಂತ್ರಸ್ತ ಮಹಿಳೆ ಆರ್.ಆರ್. ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

 

ತನಿಖೆಯ ವೇಳೆ ಆರೋಪಿ ಕೇವಲ ಮಕ್ಕಳ ಆಯೋಗದ ಸದಸ್ಯ ಮಾತ್ರವಲ್ಲದೆ, ತಾನು ಪೊಲೀಸ್ ಅಧಿಕಾರಿ, ಪತ್ರಕರ್ತ ಮತ್ತು ವಕೀಲ ಎಂದು ಹೇಳಿಕೊಂಡು ಹಲವರಿಗೆ ವಂಚಿಸುತ್ತಿದ್ದ ವಿಷಯ ಬೆಳಕಿಗೆ ಬಂದಿದೆ. ಈತ ಇದೇ ರೀತಿ ಅನೇಕ ಮಹಿಳೆಯರನ್ನು ನಂಬಿಸಿ, ಅವರ ಅಶ್ಲೀಲ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಮತ್ತು ಆರ್ಥಿಕವಾಗಿ ಶೋಷಣೆ ಮಾಡುತ್ತಿದ್ದ ಎನ್ನಲಾಗಿದೆ.

 

ದೂರು ಸ್ವೀಕರಿಸಿದ ಆರ್.ಆರ್. ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆತನ ಮೊಬೈಲ್ ಮತ್ತು ಇತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈ ಕಾಮಕಾಂಡದಲ್ಲಿ ಇನ್ನು ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ತೀವ್ರಗೊಂಡಿದೆ.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin