Skip to main content

Police Roundup

180 ನಕ್ಷತ್ರ ಆಮೆಗಳ ಜಪ್ತಿ – ಡಿಆರ್‌ಐ ಅಧಿಕಾರಿಗಳ ಮಿಂಚಿನ ಕಾರ್ಯಾಚರಣೆ

Share News

ಬೆಂಗಳೂರು: ರಾಜಧಾನಿಯ ಗಾಂಧಿನಗರದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 180 ನಕ್ಷತ್ರ ಆಮೆಗಳನ್ನು (Star Tortoises) ವಶಕ್ಕೆ ಪಡೆದಿದ್ದಾರೆ.

 

​ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಡಿಆರ್‌ಐ ಅಧಿಕಾರಿಗಳು, ಟ್ರಾಲಿ ಬ್ಯಾಗ್‌ನಲ್ಲಿ ನಕ್ಷತ್ರ ಆಮೆಗಳನ್ನುಿಟ್ಟುಕೊಂಡು ಅಕ್ರಮವಾಗಿ ಸಾಗಿಸುತ್ತಿದ್ದ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

 

​ಹತ್ತು ಸಾವಿರಕ್ಕೆ ಮಾರಾಟದ ಸಂಚು:

ಮೂಲಗಳ ಪ್ರಕಾರ, ಈ ನಕ್ಷತ್ರ ಆಮೆಗಳನ್ನು ತಲಾ 10,000 ರೂಪಾಯಿಗೆ ಮಾರಾಟ ಮಾಡಲು ಯತ್ನಿಸಲಾಗುತ್ತಿತ್ತು. “ನಕ್ಷತ್ರ ಆಮೆಗಳನ್ನು ಮನೆಯಲ್ಲಿ ಇಟ್ಟುಕೊಂಡರೆ ಅದೃಷ್ಟ ಒಲಿಯುತ್ತದೆ” ಎಂದು ಜನರನ್ನು ನಂಬಿಸಿ ವಂಚಿಸಿ ಮಾರಾಟ ಮಾಡಲು ಆರೋಪಿಗಳು ಯೋಜನೆ ರೂಪಿಸಿದ್ದರು. ಈ ಆಮೆಗಳನ್ನು ಕಲಾಸಿಪಾಳ್ಯದ ವ್ಯಕ್ತಿಯೊಬ್ಬ ತಂದುಕೊಟ್ಟಿದ್ದಾಗಿ ತಿಳಿದುಬಂದಿದೆ.

 

​ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆಯಲ್ಲೇ ಅಧಿಕಾರಿಗಳು ದಾಳಿ ನಡೆಸಿ ಆಮೆಗಳನ್ನು ಜಪ್ತಿ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ (Wildlife Protection Act) ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು, ಜಾಲದ ಹಿನ್ನೆಲೆಯನ್ನು ಭೇದಿಸಲು ಮುಂದಿನ ತನಿಖೆ ಕೈಗೊಂಡಿದ್ದಾರೆ.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin