ಬೆಂಗಳೂರು: ವಿವಿಧ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಪೋಲೆಂಡ್ ದೇಶದ ಪ್ರಧಾನಿ ಡೊನಾಲ್ಡ್ ಟಸ್ಕ್ ಹಾಗೂ ಅವರ ಉನ್ನತ ಮಟ್ಟದ ನಿಯೋಗವು ಬೆಂಗಳೂರಿಗೆ ಆಗಮಿಸಿದೆ. ಪ್ರಧಾನಿ ಟಸ್ಕ್ ಇಂದು ರಾತ್ರಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.
ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪೋಲೆಂಡ್ ಪ್ರಧಾನಿ ಮತ್ತು ಅವರ ನಿಯೋಗವನ್ನು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಕೃಷ್ಣಭೈರೇಗೌಡ ಅವರು ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.
ಗಣ್ಯರ ಉಪಸ್ಥಿತಿ:
ಈ ಸ್ವಾಗತ ಸಮಾರಂಭದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಕೆ.ಜಿ. ಜಗದೀಶ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಲವು ಹಿರಿಯ ಐಎಎಸ್ ಮತ್ತು ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.