Skip to main content

Police Roundup

ಬೆಂಗಳೂರಿನ PGಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ಭರ್ಜರಿ ದಾಳಿ: 23 PGಗಳಿಗೆ ನೋಟಿಸ್ ಜಾರಿ

Share News

ಬೆಂಗಳೂರು: ರಾಜಧಾನಿ ಬೆಂಗಳೂರಿನ ವಿವಿಧ ಪೇಯಿಂಗ್ ಗೆಸ್ಟ್ (PG) ವಸತಿ ನಿಲಯಗಳ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ನಿಯಮ ಉಲ್ಲಂಘಿಸಿ ಕಾರ್ಯಾಚರಿಸುತ್ತಿದ್ದ 23 ಪಿಜಿಗಳಿಗೆ ನೋಟಿಸ್ ನೀಡಿದ್ದಾರೆ.

 

​ನಗರದಾದ್ಯಂತ ಒಟ್ಟು 64 ಪಿಜಿಗಳಲ್ಲಿ ವ್ಯಾಪಕ ತಪಾಸಣೆ ಕೈಗೊಂಡ ಅಧಿಕಾರಿಗಳ ತಂಡ, ನೈರ್ಮಲ್ಯ ಕೊರತೆ ಹಾಗೂ ಆಹಾರ ಸುರಕ್ಷತಾ ಮಾನದಂಡಗಳನ್ನು ಗಾಳಿಗೆ ತೂರಿದ ಎಷ್ಟೋ ಪಿಜಿಗಳ ಅಡುಗೆ ಮನೆಗಳನ್ನು ಪರಿಶೀಲಿಸಿತು. ಈ ವೇಳೆ ಹಲವು ಕಡೆಗಳಲ್ಲಿ ಅವಧಿ ಮೀರಿದ (ಎಕ್ಸ್‌ಪೈರಿ) ಆಹಾರ ಪದಾರ್ಥಗಳು ಹಾಗೂ ಅಡುಗೆಗೆ ಬಳಸುತ್ತಿದ್ದ ಕಳಪೆ ಗುಣಮಟ್ಟದ ಸಾಮಗ್ರಿಗಳು ಪತ್ತೆಯಾಗಿವೆ.

 

​ದಾಳಿಯ ಸಂದರ್ಭದಲ್ಲಿ ಸಂಗ್ರಹಿಸಿದ 12 ಆಹಾರ ಮಾದರಿಗಳನ್ನು ಹೆಚ್ಚಿನ ತಪಾಸಣೆಗಾಗಿ ರಾಜ್ಯ ವಿಶ್ಲೇಷಣಾ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಆರೋಗ್ಯದ ಜೊತೆ ಆಟವಾಡಿದರೆ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸುವುದಾಗಿ ಮತ್ತು ಪಿಜಿಗಳ ಪರವಾನಗಿ ರದ್ದುಪಡಿಸುವುದಾಗಿ ಪಿಜಿ ಮಾಲೀಕರು ಹಾಗೂ ನಿರ್ವಾಹಕರಿಗೆ ಅಧಿಕಾರಿಗಳು ಕಠಿಣ ಎಚ್ಚರಿಕೆ ನೀಡಿದ್ದಾರೆ.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin