Police Roundup

ಬೆಂಗಳೂರು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಅಪರಾಧ ಪರಿಶೀಲನಾ ಸಭೆ: ಡಿಐಜಿಪಿ ಅವರಿಂದ ಪ್ರಗತಿ ಪರಿಶೀಲನೆ

Share News

ಬೆಂಗಳೂರು: ಬೆಂಗಳೂರು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಾನ್ಯ ಕೇಂದ್ರ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರು (ಡಿಐಜಿಪಿ) ಮಹತ್ವದ ಅಪರಾಧ ಪರಿಶೀಲನಾ ಸಭೆಯನ್ನು ನಡೆಸಿದರು.

​ಜಿಲ್ಲೆಯ ವ್ಯಾಪ್ತಿಯಲ್ಲಿ ಪ್ರಸ್ತುತ ಇರುವ ಅಪರಾಧ ಪರಿಸ್ಥಿತಿ, ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು.

 

ಸಭೆಯ ನೇತೃತ್ವ ವಹಿಸಿದ್ದ ಮಾನ್ಯ ಡಿಐಜಿಪಿ ಅವರು, ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಬಾಕಿ ಉಳಿದಿರುವ ಗಂಭೀರ ಪ್ರಕರಣಗಳ ತನಿಖೆಯ ಪ್ರಗತಿಯನ್ನು ಕೂಲಂಕಷವಾಗಿ ಪರಿಶೀಲಿಸಿದರು. ಹಳೆಯ ಹಾಗೂ ಸಂಕೀರ್ಣ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಲು ಮತ್ತು ತನಿಖೆಯನ್ನು ಚುರುಕುಗೊಳಿಸಲು ಸಂಬಂಧಪಟ್ಟ ತನಿಖಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

 

ಜಿಲ್ಲಾದ್ಯಂತ ಕಾನೂನು ಮತ್ತು ಸುವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಕಾಪಾಡಲು ಹಾಗೂ ಅಪರಾಧ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪರಿಣಾಮಕಾರಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಗಸ್ತು ವ್ಯವಸ್ಥೆಯನ್ನು ಬಲಪಡಿಸುವುದು, ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದುವುದು ಮತ್ತು ರೌಡಿ ನಿಗ್ರಹಕ್ಕೆ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮಾನ್ಯ ಡಿಐಜಿಪಿ ಅವರು ಸಭೆಯಲ್ಲಿ ತಿಳಿಸಿದರು.

ಈ ಉನ್ನತ ಮಟ್ಟದ ಸಭೆಯಲ್ಲಿ ಬೆಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಜಿಲ್ಲೆಯ ಪ್ರಮುಖ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

 

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin