Police Roundup

ಮೋಜು-ಮಸ್ತಿಗಾಗಿ ಬೈಕ್ ಕಳ್ಳತನ: ಕುಖ್ಯಾತ ಕಳ್ಳನ ಬಂಧನ, 8 ದ್ವಿಚಕ್ರ ವಾಹನಗಳ ವಶ

Share News

ಬೆಳಗಾವಿ: ಮೋಜು-ಮಸ್ತಿಗಾಗಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಕುಖ್ಯಾತ ಎಮ್.ಓ.ಬಿ (M.O.B) ಅಪರಾಧಿಯನ್ನು ಬಂಧಿಸುವಲ್ಲಿ ಯಮಕನಮರಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಸುಮಾರು 8 ವಿವಿಧ ಮಾದರಿಯ ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

​ಬೆನಕನಹೊಳಿ ಗ್ರಾಮದ ಸಂಜು @ ಸಂಜ್ಯಾ ಮಲ್ಲಪ್ಪಾ ಮೇಕಲಿ ಬಂಧಿತ ಆರೋಪಿ.

 

ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ ಸರಣಿ ಮೋಟಾರ್ ಸೈಕಲ್ ಕಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದವು. ಇತ್ತೀಚೆಗೆ ಏಪ್ರಿಲ್ 11ರಂದು ಹುಕ್ಕೇರಿ ತಾಲೂಕಿನ ನರಸಿಂಗಪೂರ ಗ್ರಾಮದ ಅಂಡರ್‌ಪಾಸ್ ಬಳಿ ಗಂಗಪ್ಪಾ ಕೊಡದವರ ಎಂಬುವವರ ಬಜಾಜ್ ಪ್ಲಾಟಿನಾ ಬೈಕ್ ಕಳ್ಳತನವಾಗಿತ್ತು. ಈ ಬಗ್ಗೆ ದಾಖಲಾಗಿದ್ದ ದೂರನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಿದ್ದರು.

 

ಪಿಐ ಜೆ.ಎಫ್.ಮುಶಾಪುರಿ ಹಾಗೂ ಪಿಎಸ್ ಐ ಬಿ.ಕೆ. ಪಾಟೀಲ ಅವರ ನೇತೃತ್ವದ ತಂಡವು ಏಪ್ರಿಲ್ 17ರಂದು ಬೆನಕನಹೊಳಿ ಗ್ರಾಮದ ಹದ್ದಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾಗ, ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಸಂಜ್ಯಾ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದಾಗ, ಈತನು ತನ್ನ ಮೋಜು-ಮಸ್ತಿಗಾಗಿ ವಿವಿಧ ಜಿಲ್ಲೆ ಹಾಗೂ ನೆರೆ ರಾಜ್ಯಗಳಲ್ಲಿ ಬೈಕ್‌ಗಳನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿದೆ.

​ಆರೋಪಿ ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ವಿವಿಧೆಡೆ ಅಡಗಿಸಿಟ್ಟಿದ್ದ ಒಟ್ಟು 8 ಮೋಟಾರ್ ಸೈಕಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

 

ಸರಣಿ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಸಿಬ್ಬಂದಿಗಳಾದ ಜಿ.ಬಿ.ನಾಗನ್ನವರ ಮತ್ತು ಪಿ.ಕೆ.ಕಿಳ್ಳಿಕೇತರ ಸೇರಿದಂತೆ ಇಡೀ ತನಿಖಾ ತಂಡವನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಶ್ಲಾಘಿಸಿದ್ದಾರೆ. ಆರೋಪಿಯ ವಿರುದ್ಧ ಬಿಎನ್ಎಸ್ (BNS) ಕಾಯ್ದೆಯಡಿ ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin