ಅಹ್ಮದಾಬಾದ್: ಗುಜರಾತ್‌ನ ಸೂರತ್ ನಗರದಲ್ಲಿ ಭೀಕರ ಹಾಗೂ ಅತ್ಯಂತ ನಿಗೂಢ ಘಟನೆಯೊಂದು ಬೆಳಕಿಗೆ ಬಂದಿದ್ದು, ಯಾವುದೇ ಮುನ್ಸೂಚನೆ ಇಲ್ಲದೆ ರಾತ್ರೋರಾತ್ರಿ ಬರೋಬ್ಬರಿ 100 ಬಡವರ ಆಶಯದ ಮನೆಗಳನ್ನು ಬುಲ್ಡೋಜರ್ ಬಳಸಿ ನೆಲಸಮಗೊಳಿಸಲಾಗಿದೆ. ಆದರೆ, ಈ ಕಾರ್ಯಾಚರಣೆ ನಡೆಸಿದವರು ಯಾರು ಎಂಬುದು ಸದ್ಯಕ್ಕೆ ಯಾರಿಗೂ ತಿಳಿಯದ ರಹಸ್ಯವಾಗಿ ಪರಿಣಮಿಸಿದೆ. ಸೂರತ್‌ನ ಲಿಂಬಾಯತ್ ಪ್ರದೇಶದ ಮಹಾದೇವನಗರ-3 ರಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ತಲೆಮಾರುಗಳಿಂದ ವಾಸಿಸುತ್ತಿದ್ದ ನೂರಾರು ಕುಟುಂಬಗಳು ಈಗ ಬೀದಿಗೆ ಬಿದ್ದಿವೆ. ಲಿಂಬಾಯತ್‌ನ ಈ ಕೊಳಗೇರಿ ಪ್ರದೇಶದಲ್ಲಿ…
ಮೈಸೂರು: ಮೈಸೂರು ನಗರ ಪೊಲೀಸ್ ಘಟಕವು ಕಳ್ಳರು ಹಾಗೂ ವಂಚಕರ ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸಿದ್ದು, ಕಳೆದ ಮೂರೇ ತಿಂಗಳಲ್ಲಿ ಬರೋಬ್ಬರಿ 2.09 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಜಾಲಕ್ಕೆ ಸಂಬಂಧಿಸಿದಂತೆ ಒಟ್ಟು 55 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರಾದ (ಸಿಪಿ) ಸೀಮಾ ಲಾಟ್ಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಗಳ ಸಂಪೂರ್ಣ ವಿವರವನ್ನು ಹಂಚಿಕೊಂಡರು. ಪೊಲೀಸರು…