ತುಮಕೂರು: ತುಮಕೂರಿನಲ್ಲಿ ದಾಖಲಾಗಿದ್ದ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆ ಹಾಗೂ ತುಮಕೂರು ಪೊಲೀಸರು ಭರ್ಜರಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಪಾಕಿಸ್ತಾನ ಮೂಲದ ಉಗ್ರನೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಆರೋಪಿ, ದಾವಣಗೆರೆಯ ಜಮೀರ್ ಖಾನ್ ಎಂಬಾತನನ್ನು ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಯಶಸ್ವಿಯಾಗಿ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ದಾವಣಗೆರೆಯ ಬೀಡಿ ಲೇಔಟ್ ನಿವಾಸಿ ಜಮೀರ್ ಖಾನ್ ಎಂದು ಗುರುತಿಸಲಾಗಿದೆ. ಈತ ವಿವಿಧ ಸಾಮಾಜಿಕ ಜಾಲತಾಣಗಳ (Social Media) ಮೂಲಕ ಪಾಕಿಸ್ತಾನ ಮೂಲದ ಭಯೋತ್ಪಾದಕನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದ ಎನ್ನಲಾಗಿದೆ….
ಜನರ ಮುಗ್ಧತೆ ಹಾಗೂ ಸ್ನೇಹವನ್ನೇ ಬಂಡವಾಳ ಮಾಡಿಕೊಂಡು, ನಂಬಿದ ಗೆಳೆಯನಿಗೇ ಲಕ್ಷಾಂತರ ರೂಪಾಯಿ ನಾಮ ಹಾಕಿ ರಾತ್ರೋರಾತ್ರಿ ಮನೆ ಖಾಲಿ ಮಾಡಿ ವ್ಯಕ್ತಿಯೊಬ್ಬ ಪರಾರಿಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮೂಲತಃ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ನಿವಾಸಿಯಾದ ಸಮಲ್ ರಾಜ್ (ಶ್ಯಾಮಲ ರಾಜ) ಎಂಬಾತನೇ ಈ ವಂಚನೆ ಎಸಗಿ ತಲೆಮರೆಸಿಕೊಂಡಿರುವ ಕಿಲಾಡಿ ವಂಚಕ. ಆರೋಪಿ ಸಮಲ್ ರಾಜ್‌ನ ವಂಚನೆಯ ಜಾಲ ಅತ್ಯಂತ ವ್ಯವಸ್ಥಿತವಾಗಿದೆ. ಮೇಲ್ನೋಟಕ್ಕೆ ಶ್ರೀಮಂತರ ಹಾಗೂ ಪ್ರಭಾವಿ ವ್ಯಕ್ತಿಗಳೊಂದಿಗೆ ಆತ್ಮೀಯ ಸ್ನೇಹ ಬೆಳೆಸುವ…