ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸವಿರುವ ರಾಜಧಾನಿಯ ಹೈಪ್ರೊಫೈಲ್ ವಲಯ ಸದಾಶಿವನಗರದಲ್ಲಿ ಮಾಟ-ಮಂತ್ರದಂತಹ ವಾಮಾಚಾರ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಮುಖ್ಯಮಂತ್ರಿಗಳ ನಿವಾಸಕ್ಕೆ ಕೂಗಳತೆಯ ದೂರದಲ್ಲೇ ಈ ಕೃತ್ಯ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸದಾಶಿವನಗರದ ಜಿಬಿಎ ಮೈದಾನದ ಮುಂಭಾಗದ ರಸ್ತೆಯ ಮಧ್ಯೆ ಈ ಘಟನೆ ಬೆಳಕಿಗೆ ಬಂದಿದೆ. ಅಪರಿಚಿತ ವ್ಯಕ್ತಿಗಳು ರಸ್ತೆಯ ಮಧ್ಯದಲ್ಲೇ ದೊಡ್ಡದೊಂದು ವೃತ್ತಾಕಾರವನ್ನು ಹಾಕಿ, ಅಲ್ಲಿ ಕೋಳಿಯನ್ನು ಬಲಿ ಕೊಟ್ಟು, ನಿಂಬೆಹಣ್ಣುಗಳನ್ನು…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭೀಕರ ಘಟನೆಯೊಂದು ಬೆಳಕಿಗೆ ಬಂದಿದ್ದು, ವಿವಾಹಿತ ಗೃಹಿಣಿಯೊಬ್ಬರು ತಮ್ಮ ನಿವಾಸದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರ ಪೋಷಕರು ಇದು ಆತ್ಮಹತ್ಯೆಯಲ್ಲ, ಪತಿಯೇ ನಡೆಸಿರುವ ಕೊಲೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಮೃತ ಗೃಹಿಣಿಯನ್ನು ಹುಣಸೂರು ಪುರಸಭೆಯ ಮಾಜಿ ಅಧ್ಯಕ್ಷೆ ಗೀತಾ ನಿಂಗರಾಜು ಅವರ ಪುತ್ರಿ ಸಂಧ್ಯಾ (30) ಎಂದು ಗುರುತಿಸಲಾಗಿದೆ. ಸದ್ಯ ಮೈಸೂರಿನ ಸರಸ್ವತಿಪುರಂನ ಜವರೇಗೌಡ ಪಾರ್ಕ್ ಸಮೀಪದ ನಿವಾಸದಲ್ಲಿ ಈ ಆಘಾತಕಾರಿ ಘಟನೆ ಸಂಭವಿಸಿದೆ. ಕೆಲವು…