ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಮ್ಮೆ ಸೌತ್ ಅಂಡರ್ ವರ್ಲ್ಡ್ ರಕ್ತಸಿಕ್ತವಾಗಿದೆ. ಹಳೆ ಹಗೆತನ ಹಾಗೂ ರಿವೇಂಜ್ ಕಿಲ್ಲಿಂಗ್‌ಗೆ ಬೆಂಗಳೂರು ದಕ್ಷಿಣ ಭಾಗದ ಕುಖ್ಯಾತ ರೌಡಿ ಶೀಟರ್ ಹಲ್ಮುರ್ಕ ರಾಜಾ ಬಲಿಯಾಗಿದ್ದಾನೆ. ಮಾನ್ಯ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ರಾಜ್ಯದಲ್ಲಿ ರೌಡಿಗಳ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದರೂ, ಭೂಗತ ಜಗತ್ತಿನ ಈ ಸರಣಿ ಕೊಲೆಗಳು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿವೆ. ಕೊಲೆಯಾದ ರೌಡಿ ರಾಜಾ ಅಲಿಯಾಸ್ ಹಲ್ಮುರ್ಕ ರಾಜಾ, ಮಾಜಿ ರೌಡಿ ಜೇಡ್ರಳ್ಳಿ ಕೃಷ್ಣಪ್ಪನ…
ಮಂಗಳೂರು: ನಗರದ ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಖದೀಮನನ್ನು ಮಂಗಳೂರು ಸಿಸಿಬಿ ಪೊಲೀಸರು ಜೂನ್ 25ರಂದು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಯು ಹೊರಗಿನಿಂದ ನಿಷೇಧಿತ ಎಂಡಿಎಂಎ ಮಾದಕ ವಸ್ತುವನ್ನು ಖರೀದಿಸಿ ತಂದು, ಕುಳಾಯಿ ಗುಡ್ಡೆ ಪರಿಸರದಲ್ಲಿರುವ ತನ್ನ ಮನೆಯನ್ನೇ ಅಡ್ಡೆ ಮಾಡಿಕೊಂಡಿದ್ದ. ಅಲ್ಲಿಂದಲೇ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿರುವ ಬಗ್ಗೆ ಮಂಗಳೂರು ಸಿಸಿಬಿ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು….