ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನಲ್ಲಿ ಅಕ್ರಮವಾಗಿ ನಾಡ ಬಂದೂಕು ತಯಾರಿಸುತ್ತಿದ್ದ ಅಡ್ಡೆಯೊಂದರ ಮೇಲೆ ದಾಳಿ ನಡೆಸಿರುವ ಪೊಲೀಸರು, ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಅಕ್ಲಾಪುರ ಗ್ರಾಮದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಕೋಣಂದೂರು ಮೂಲದ ಸುಧಾಕರ ಆಚಾರಿ (೫೬) ಬಂಧಿತ ಆರೋಪಿ. ಈತ ವೃತ್ತಿಯಲ್ಲಿ ಕೃಷಿಕನಾಗಿದ್ದು, ಇದರ ಜೊತೆಗೆ ಬಡಗಿ (Carpentry) ಕೆಲಸವನ್ನೂ ಮಾಡಿಕೊಂಡಿದ್ದ ಎನ್ನಲಾಗಿದೆ. ಆರೋಪಿ ಸುಧಾಕರ ಆಚಾರಿ ಬಡಗಿ ಕೆಲಸದ ನೆಪದಲ್ಲಿ ಕಾನೂನುಬಾಹಿರವಾಗಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸುತ್ತಿದ್ದಾನೆ…
ವಿಜಯನಗರ: ಮದುವೆಯಾಗಿ ಕೇವಲ ನಾಲ್ಕು ತಿಂಗಳು ಕಳೆಯುವಷ್ಟರಲ್ಲಿ ನವವಿವಾಹಿತೆಯೊಬ್ಬರು ಪತಿಯ ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡಾ ನಿವಾಸಿ ಕೌಶಲ್ಯ (೨೩) ಮೃತಪಟ್ಟ ದುರ್ದೈವಿ. ಈಕೆ ಪತಿ ಶಿವಕುಮಾರ್ ನಾಯ್ಕ್ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ಮೂಡಿವೆ. ಪತಿ ಶಿವಕುಮಾರ್ ನಾಯ್ಕ್ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು…