ಪ್ರೀತಿ-ಪ್ರೇಮದ ಹೆಸರಿನಲ್ಲಿ ಮದುವೆಯಾಗುವುದಾಗಿ ನಂಬಿಸಿ, ಬಳಿಕ ಜಾತಿಯ ಕಾರಣ ನೀಡಿ ಪೊಲೀಸ್ ಪೇದೆಯೊಬ್ಬ ವಂಚಿಸಿದ್ದಾನೆ ಎಂದು ಆರೋಪಿಸಿ ನೊಂದ ಯುವತಿಯೊಬ್ಬರು ಪೊಲೀಸ್ ಠಾಣೆಯ ಮುಂಭಾಗವೇ ಮೌನ ಪ್ರತಿಭಟನೆ ನಡೆಸಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ. ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿರುವ ದಿನೇಶ್ ಯಾದವ್ ಎಂಬಾತನೇ ವಂಚನೆಯ ಆರೋಪ ಎದುರಿಸುತ್ತಿರುವ ಯುವಕ. ತನಗೆ ನ್ಯಾಯ ಬೇಕು ಮತ್ತು ದಿನೇಶ್ ತನ್ನನ್ನು ಮದುವೆಯಾಗಬೇಕು ಎಂದು ಆಗ್ರಹಿಸಿ ಸಂತ್ರಸ್ತ ಯುವತಿ ಲಕ್ಷ್ಮಿ ನೇತೃತ್ವದಲ್ಲಿ ಹಾಗೂ ASSK ಸಂಘಟನೆಯ ರಾಜ್ಯಾಧ್ಯಕ್ಷ ಕೆ.ಎಂ. ಸಂದೇಶ್…
ಬೀದರ್: ಕನ್ನಡ ಕಿರುತೆರೆಯ ಜನಪ್ರಿಯ ಹಾಸ್ಯ ಕಾರ್ಯಕ್ರಮಗಳಾದ ‘ಕಾಮಿಡಿ ಕಿಲಾಡಿಗಳು’ ಹಾಗೂ ‘ಮಜಾಭಾರತ’ ಮೂಲಕ ಮನೆಮಾತಾಗಿದ್ದ ಕಲಾವಿದ ಸಿದ್ಧಾರ್ಥ್ ಪರಸನೋರ (36) ಅವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ. ಇಲ್ಲಿನ ಹುಮನಾಬಾದ್ ತಾಲೂಕಿನ ಹಣಕುಣಿ ರಸ್ತೆಯ ಪಕ್ಕದ ಅರಣ್ಯ ಪ್ರದೇಶದಲ್ಲಿ ಸಿದ್ಧಾರ್ಥ್ ಅವರ ಮೃತದೇಹ ಪತ್ತೆಯಾಗಿದ್ದು, ಕಿರುತೆರೆ ಲೋಕ ಹಾಗೂ ಅಭಿಮಾನಿಗಳಲ್ಲಿ ತೀವ್ರ ಆಘಾತವನ್ನುಂಟು ಮಾಡಿದೆ. ಮೂಲತಃ ಹುಮನಾಬಾದ್ ನಗರದ ಟೀಚರ್ಸ್ ಕಾಲೋನಿಯ ನಿವಾಸಿಯಾದ ಸಿದ್ಧಾರ್ಥ್ ಅವರು, ಜೂನ್ 13ರಂದು ಸ್ನೇಹಿತರೊಂದಿಗೆ ಸೇರಿ…