ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಂತಾರಾಷ್ಟ್ರೀಯ ಮಟ್ಟದ ಡ್ರಗ್ಸ್ ಜಾಲವನ್ನು ಭೇದಿಸಿದ್ದಾರೆ. ಕಾರ್ಯಾಚರಣೆ ವೇಳೆ ಸುಮಾರು 70 ಲಕ್ಷದ 50 ಸಾವಿರ ರೂಪಾಯಿ ಮೌಲ್ಯದ 130 ಗ್ರಾಂ ತೂಕದ ಉನ್ನತ ದರ್ಜೆಯ ಕೊಕೇನ್ ಮಾದಕ ವಸ್ತುವನ್ನು ಜಪ್ತಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉಗಾಂಡಾ ಮೂಲದ ಜನತ್ ಎಂಬ ಮಹಿಳಾ ಡ್ರಗ್ ಪೆಡ್ಲರ್ ಹಾಗೂ ಆಕೆಯಿಂದ ಡ್ರಗ್ಸ್ ಪಡೆದುಕೊಳ್ಳುತ್ತಿದ್ದ ವಾಹಬ್ ಎಲ್ವಿಸ್ ಯುನಿಸ್ ಎಂಬಾತನನ್ನು ಸಿಸಿಬಿ ಪೊಲೀಸರು…
ಚಿಕ್ಕಬಳ್ಳಾಪುರ: ವಿವಾಹಿತ ಮಹಿಳೆಯೊಬ್ಬರಿಗೆ ಮೈಯೊರೆಸುವ ಮತ್ತಿನ ಔಷಧಿ ನೀಡಿ ಅತ್ಯಾಚಾರ ಎಸಗಿ, ಬಳಿಕ ಆಕೆಯ ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ಒಂದೂವರೆ ವರ್ಷಗಳ ಕಾಲ ನಿರಂತರವಾಗಿ ಲೈಂಗಿಕ ದೌರ್ಜನ್ಯ ಹಾಗೂ ಹಣದ ಬೇಡಿಕೆ ಇಟ್ಟಿದ್ದ ಕೃತ್ಯವೊಂದು ಜಿಲ್ಲೆಯ ಶಿಡ್ಲಘಟ್ಟದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ವಂಚನೆ ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ ಮಂಡ್ಯ ಮೂಲದ ರಮೇಶ್ ಎಂಬಾತನ ವಿರುದ್ಧ ಇದೀಗ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೆಂಗಳೂರಿನಲ್ಲಿ ವಾಸವಾಗಿದ್ದ ತನ್ನ ಚಿಕ್ಕಮ್ಮನ…