ಹುಣಸೂರು: ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ರೆಸಾರ್ಟ್‌ವೊಂದಕ್ಕೆ ನುಗ್ಗಿ, ಪ್ರೇಮಿಗಳ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆಯೊಡ್ಡಿ ಬೈಕ್ ಕಸಿದುಕೊಂಡು ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಹುಣಸೂರು ಗ್ರಾಮಾಂತರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಹುಣಸೂರು ನಗರದ ನಿವಾಸಿಗಳಾದ ವೀಲ್ ವಾಸಿಂ, ಶೋಯೆಬ್, ಅಜರ್ ಮತ್ತು ತಾಲೂಕಿನ ಕೊಳವಿಗೆ ಗ್ರಾಮದ ಶ್ರೀಕಾಂತ್ (ಅಲಿಯಾಸ್ ಸಿರಿ) ಎಂದು ಗುರುತಿಸಲಾಗಿದೆ. ಮೈಸೂರು ಮೂಲದ ಅಸ್ಲಂ ಎಂಬ ಯುವಕ ತನ್ನ ಪ್ರೇಯಸಿಯೊಂದಿಗೆ ಹುಣಸೂರಿನ ರೆಸಾರ್ಟ್‌ವೊಂದಕ್ಕೆ ಆಗಮಿಸಿದ್ದರು. ಈ…
ಭಟ್ಕಳ: ತಾಲೂಕಿನ ನಗರ ಪ್ರದೇಶದಲ್ಲಿ ತಂಬಾಕು ಉತ್ಪನ್ನಗಳ ಅಕ್ರಮ ಮಾರಾಟ ಹಾಗೂ ತಂಬಾಕು ನಿಯಂತ್ರಣ ಕಾಯ್ದೆಯ (COTPA) ಉಲ್ಲಂಘನೆ ಸಾರ್ವಜನಿಕವಾಗಿ ಕಂಡುಬಂದ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆ ಮತ್ತು ತಂಬಾಕು ನಿಯಂತ್ರಣ ದಳದ ಅಧಿಕಾರಿಗಳು ಜಂಟಿಯಾಗಿ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿಯ ವೇಳೆ ಒಟ್ಟು 16 ಅಂಗಡಿಗಳನ್ನು ಪರಿಶೀಲಿಸಿ, ನಿಯಮ ಉಲ್ಲಂಘಿಸಿದ ಮಾಲೀಕರಿಗೆ ದಂಡ ವಿಧಿಸಲಾಗಿದೆ. ನಗರದ ಪ್ರಮುಖ ಕೇಂದ್ರವಾದ ಶಂಸುದ್ದೀನ್ ಸರ್ಕಲ್ ಸೇರಿದಂತೆ ವಿವಿಧ ಆಯಕಟ್ಟಿನ ಪ್ರದೇಶಗಳ ಅಂಗಡಿ ಮುಂಗಟ್ಟುಗಳ ಮೇಲೆ ಅಧಿಕಾರಿಗಳ ತಂಡ ದಿಢೀರ್…