ಬೆಂಗಳೂರು: ರಾಜಧಾನಿಯ ಪೊಲೀಸ್ ಅಧಿಕಾರಿಗಳೊಂದಿಗಿನ ತಮ್ಮ ಮೊದಲ ಸಭೆಯಲ್ಲೇ ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಇಲಾಖೆಯ ಶಿಸ್ತು ಮತ್ತು ಕರ್ತವ್ಯ ಲೋಪದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದು, ಕರ್ತವ್ಯದೀಕ್ಷೆ ಮರೆತರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸಭೆಯಲ್ಲಿ ಗೃಹ ಸಚಿವರು ನೀಡಿದ ಪ್ರಮುಖ ಆದೇಶಗಳು ಮತ್ತು ಎಚ್ಚರಿಕೆಗಳ ವಿವರ ಇಲ್ಲಿದೆ. ಪೊಲೀಸ್ ಇಲಾಖೆಯ ಬಲವರ್ಧನೆಗೆ ಮುನ್ನಡಿ ಬರೆದ ಗೃಹ ಸಚಿವರು, “ಪೊಲೀಸ್ ಸಿಬ್ಬಂದಿಗೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಸೌಕರ್ಯ ಹಾಗೂ ಸವಲತ್ತುಗಳನ್ನು…
ಕುಂದಾಪುರ: ಮೃತಪಟ್ಟ ವ್ಯಕ್ತಿಗಳ ಹೆಸರಿನಲ್ಲಿ ನಕಲಿ ದಾಖಲೆಗಳು ಹಾಗೂ ನಕಲಿ ಪಾನ್ ಕಾರ್ಡ್‌ಗಳನ್ನು ಸೃಷ್ಟಿಸಿ, ಉಪನೋಂದಣಾಧಿಕಾರಿಗಳ ಕಚೇರಿಯಲ್ಲೇ ಖೋಟಾ ಸಹಿ ಹಾಕಿ ಕೋಟ್ಯಂತರ ರೂಪಾಯಿ ಮೌಲ್ಯದ ಭೂಮಿಯನ್ನು ವಂಚನೆಯಿಂದ ನೋಂದಣಿ ಮಾಡಿಕೊಂಡಿರುವ ಆಘಾತಕಾರಿ ಹಗರಣವೊಂದು ಕುಂದಾಪುರದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳ ವಿರುದ್ಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಗಂಭೀರ ಸ್ವರೂಪದ ಅಪರಾಧ ಮೊಕದ್ದಮೆ ದಾಖಲಾಗಿದೆ. ಮುಂಬೈನ ದಹಿಸರ್ (ಪಶ್ಚಿಮ) ನಿವಾಸಿ ಸುನೀಲ್ ದೇವ ಪೈ (57) ಎಂಬುವರು ನೀಡಿದ ಅಧಿಕೃತ ದೂರಿನ ಮೇರೆಗೆ…