ಹಾರೋಹಳ್ಳಿ: ಇಲ್ಲಿನ ಸರ್ಕಾರಿ ಆಸ್ಪತ್ರೆಯ ಮಹಿಳಾ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಹೊರಗುತ್ತಿಗೆ ಸಿಬ್ಬಂದಿಯೊಬ್ಬ ಸಿಕ್ಕಿಬಿದ್ದು, ಸದ್ಯ ಪೊಲೀಸರ ಅತಿಥಿಯಾಗಿರುವ ಗಂಭೀರ ಘಟನೆ ಹಾರೋಹಳ್ಳಿ ತಾಲೂಕಿನ ತೋಕಸಂದ್ರದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ತೋಕಸಂದ್ರ ಗ್ರಾಮದ ಸುನೀಲ್ (ಶ್ರೀಧರ್) ಎಂದು ಗುರುತಿಸಲಾಗಿದೆ. ಈತ ಕಳೆದ 5 ವರ್ಷಗಳಿಂದ ಇದೇ ಸರ್ಕಾರಿ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ಎಂದು ತಿಳಿದುಬಂದಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತೋಕಸಂದ್ರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದರು….
ಕವರ್ಧ (ಛತ್ತೀಸ್‌ಗಢ): ಛತ್ತೀಸ್‌ಗಢದ ಕವರ್ಧ ಜಿಲ್ಲೆಯ ಹೊಲವೊಂದರಲ್ಲಿ ಗೋಣಿ ಚೀಲದಲ್ಲಿ ಪತ್ತೆಯಾಗಿದ್ದ ಶವದ ನಿಗೂಢ ರಹಸ್ಯವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ತನ್ನ ಆಕ್ಷೇಪಾರ್ಹ ವೀಡಿಯೋ ಇಟ್ಟುಕೊಂಡು ನಿರಂತರವಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಪ್ರಿಯಕರನನ್ನು ಮಹಿಳೆಯೊಬ್ಬಳು ಪತಿ ಹಾಗೂ ಮೈದುನನೊಂದಿಗೆ ಸೇರಿ ಭೀಕರವಾಗಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರೂ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಕವರ್ಧ ಜಿಲ್ಲೆಯ ಪಾಂಡಾತರೈ ಪೊಲೀಸ್ ಠಾಣಾ ವ್ಯಾಪ್ತಿಯ ಸೋಂಢಾ ಗ್ರಾಮದ ಹೊಲವೊಂದರಲ್ಲಿ ಇತ್ತೀಚೆಗೆ ಗೋಣಿ ಚೀಲದಲ್ಲಿ ಸುತ್ತಿರುವ ಸ್ಥಿತಿಯಲ್ಲಿ…