ಬೀದರ್: ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಅತ್ಯಂತ ವಿಕೃತ ಘಟನೆಯೊಂದು ಜಿಲ್ಲೆಯ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಯಾದ ‘ಬ್ರಿಮ್ಸ್’ (BRIMS) ಶವಾಗಾರದಲ್ಲಿ ಬೆಳಕಿಗೆ ಬಂದಿದೆ. ಶವಾಗಾರಕ್ಕೆ ಬರುವ ಮೃತ ಮಹಿಳೆಯರ ವಸ್ತ್ರಾಪಹರಣ ಮಾಡಿ ವಿಕೃತವಾಗಿ ಫೋಟೋ ಶೂಟ್ ಮಾಡುತ್ತಿದ್ದ ಮುನೀರ್ ಅಹ್ಮದ್ ಎಂಬ ಸಿಬ್ಬಂದಿಯ ಹೀನ ಕೃತ್ಯ ಬಯಲಾಗಿದ್ದು, ಆರೋಪಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆರೋಪಿ ಮುನೀರ್ ಅಹ್ಮದ್ ಆಸ್ಪತ್ರೆಯ ಶವಾಗಾರಕ್ಕೆ ಬರುತ್ತಿದ್ದ ಮಹಿಳೆಯರ ಮೃತದೇಹಗಳ ನಗ್ನ ಚಿತ್ರಗಳನ್ನು ತನ್ನ ಮೊಬೈಲ್‌ನಲ್ಲಿ ರಹಸ್ಯವಾಗಿ ಕ್ಲಿಕ್ಕಿಸಿ, ಸಂಗ್ರಹಿಸಿಟ್ಟುಕೊಳ್ಳುತ್ತಿದ್ದ ಎನ್ನಲಾಗಿದೆ. ಈತನ…
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 15 ಲಕ್ಷ ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ಬೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (AEE) ಅಧಿಕಾರಿಯನ್ನು ತಡೆದು, ರೆಡ್ ಹ್ಯಾಂಡ್ ಆಗಿ ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಜಾಜಿನಗರ ಬೆಸ್ಕಾಂ (BESCOM) ಕಚೇರಿಯ AEE ಬಸವರಾಜಯ್ಯ ಲೋಕಾಯುಕ್ತ ಬಲೆಗೆ ಬಿದ್ದ ಮಹಾ ಭ್ರಷ್ಟ ಅಧಿಕಾರಿಯಾಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯ ದೊಡ್ಡ ಸಂಸ್ಥೆಯೊಂದರ ವಿದ್ಯುತ್ ಬಿಲ್‌ನಲ್ಲಿ (Electric City Bill) ವಿಧಿಸಲಾಗಿದ್ದ ಭಾರಿ ಪ್ರಮಾಣದ ದಂಡದ…