ಬೆಂಗಳೂರು: ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ ಹೆಸರಲ್ಲೇ ನಕಲಿ ದಾಖಲೆ ಹಾಗೂ ಮುದ್ರೆ ಸೃಷ್ಟಿಸಿ, ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕರಡುಗಟ್ಟಿದ ಅಪರಾಧಿಯೊಬ್ಬ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ರಾಜಾರೋಷವಾಗಿ ಬಿಡುಗಡೆಯಾಗಿ ಪರಾರಿಯಾಗಿರುವ ಆಘಾತಕಾರಿ ಹಗರಣ ಬೆಳಕಿಗೆ ಬಂದಿದೆ. ಕಿಡ್ನ್ಯಾಪ್ ಮತ್ತು ದರೋಡೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಶಂಕರ್ ಎ ತಂದೆ ಆರ್ಮುಗಂ (ಶಿಕ್ಷಾ ಬಂದಿ ಸಂಖ್ಯೆ: 12503) ಎಂಬಾತನೇ ಜೈಲಾಧಿಕಾರಿಗಳ ಕಣ್ಣಿಗೆ ಮಣ್ಣೆರಚಿ ನಕಲಿ ಆದೇಶದ ಮೂಲಕ ಜೈಲಿನಿಂದ ಹೊರನಡೆದ ಖದೀಮ. ಪ್ರಸ್ತುತ…
ಕೊಯಮತ್ತೂರು: ಪ್ರೀತಿಸಿದ ಯುವಕನ ಕ್ರಿಮಿನಲ್ ಹಿನ್ನೆಲೆ ತಿಳಿದು ಆತನಿಂದ ಅಂತರ ಕಾಯ್ದುಕೊಂಡಿದ್ದ ಯುವತಿಯ ಮನೆ ಮೇಲೆ ಭಗ್ನ ಪ್ರೇಮಿಯೊಬ್ಬ ತನ್ನ ಗ್ಯಾಂಗ್ ಜೊತೆ ಸೇರಿ ಪೆಟ್ರೋಲ್ ಬಾಂಬ್ ಎಸೆದು ಭೀತಿ ಸೃಷ್ಟಿಸಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ದಾಳಿಯ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಮೂಡಿಸಿದೆ. ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ತೊಂಡಾಮುತ್ತೂರಿನ ಸಿಬಿಸಿ ಗಾರ್ಡನ್ ನಿವಾಸಿ ಸುಂದರಮೂರ್ತಿ ಎಂಬುವವರ ಪುತ್ರಿ ಕಾಲೇಜು ವಿದ್ಯಾಭ್ಯಾಸ ಮಾಡುವಾಗ ಸ್ಥಳೀಯ ನಿವಾಸಿ ಕಾರ್ತಿಕ್ ಎಂಬಾತನನ್ನು…