ಹೈದರಾಬಾದ್ (ತೆಲಂಗಾಣ): ಪ್ರಿಯಕರನ ದೈಹಿಕ ಮೋಹಕ್ಕೆ ಬಿದ್ದ ಮಹಿಳೆಯೊಬ್ಬಳು, ಹೆತ್ತ ಮಗಳನ್ನೂ ಲೆಕ್ಕಿಸದೆ ತನ್ನ ಪತಿಯನ್ನೇ ಅತ್ಯಂತ ಭೀಕರವಾಗಿ ಕೊಲೆ ಮಾಡಿ ಸಮಾಧಿ ಮಾಡಿರುವ ದಾರುಣ ಘಟನೆಯೊಂದು ತೆಲಂಗಾಣದ ನಾರಾಯಣಖೇಡ್‌ನಲ್ಲಿ ಬೆಳಕಿಗೆ ಬಂದಿದೆ. ಯಾರಿಗೂ ಅನುಮಾನ ಬಾರದಿರಲು ಸಿನಿಮೀಯ ಶೈಲಿಯಲ್ಲಿ ಸ್ಕೆಚ್ ಹಾಕಿ ಪತಿಯನ್ನು ಮುಗಿಸಿರುವ ಈ ಕೃತ್ಯ ಸಮಾಜವನ್ನೇ ಬೆಚ್ಚಿಬೀಳಿಸಿದೆ. ಕೊಲೆಯಾದ ದುರ್ದೈವಿಯನ್ನು ಮುತ್ಯಂ ರೆಡ್ಡಿ ಎಂದು ಗುರುತಿಸಲಾಗಿದೆ. ಇವರು ಬೋರ್‌ವೆಲ್ ರಿಪೇರಿ ಕೆಲಸ ಮಾಡಿಕೊಂಡಿದ್ದರು. ಇವರ ಪತ್ನಿ ಕಲ್ಪನಾ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ…
ಹಾವೇರಿ: ಜಿಲ್ಲೆಯ ಗ್ರಾಮೀಣ ಭಾಗದ ರಸ್ತೆಗಳ ಅವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಇಚ್ಚಂಗಿ ಗ್ರಾಮದ ಕೊನೆಯ ಹಳ್ಳಿಯಿಂದ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಯಲ್ಲಾಪುರ ಗ್ರಾಮಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಸಂಚಾರ ದುಸ್ತರವಾಗಿದೆ. ಎರಡು ಜಿಲ್ಲೆಗಳ ಪ್ರಮುಖ ಗ್ರಾಮಗಳನ್ನು ಸಂಪರ್ಕಿಸುವ ಈ ರಸ್ತೆಯುದ್ದಕ್ಕೂ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ಎದುರಾಗಿದೆ. ಇತ್ತೀಚೆಗೆ ಸುರಿಯುತ್ತಿರುವ…