ಭಟ್ಕಳ: ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಮಾಜದ ಶಾಂತಿ, ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದ ಹಾಗೂ ನಿರಂತರವಾಗಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿದ್ದ ಇಬ್ಬರು ರೌಡಿಶೀಟರ್‌ಗಳನ್ನು ಉತ್ತರ ಕನ್ನಡ ಜಿಲ್ಲೆಯಿಂದ ಆರು ತಿಂಗಳ ಅವಧಿಗೆ ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭರ್ಜರಿ ಆದೇಶ ಹೊರಡಿಸಿದ್ದಾರೆ. ಭಟ್ಕಳ ತಾಲೂಕಿನ ಮುರ್ಡೇಶ್ವರದ ಮಾವಳ್ಳಿ-2 ನಿವಾಸಿ ಶೇಖರ ಮಂಜುನಾಥ ನಾಯ್ಕ (25) ಹಾಗೂ ಕೋಣಾರದ ಕೆರೆಹಿತ್ತಲ ನಿವಾಸಿ ಮಿಥುನ ಕುಪ್ಪಯ್ಯ ನಾಯ್ಕ (27) ಗಡಿಪಾರಾದ ಕುಖ್ಯಾತ ಆರೋಪಿಗಳಾಗಿದ್ದಾರೆ. ಗಡಿಪಾರು ಆದೇಶಕ್ಕೆ ಬಲವಾದ…
ಬೆಳಗಾವಿ: ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಅಕ್ರಮ ಬಾಂಗ್ಲಾದೇಶಿ ವಲಸಿಗರ ಹಾವಳಿ ಕುರಿತಂತೆ ಬೆಳಗಾವಿ ಪೊಲೀಸರು ನಗರದಲ್ಲಿ ಭಾರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ವಲಸಿಗರು ನಗರಕ್ಕೆ ಬಂದಿಳಿದಿದ್ದಾರೆ ಎಂಬ ಶಂಕೆಯ ಹಿನ್ನೆಲೆಯಲ್ಲಿ ಪೊಲೀಸರು ಭಾರಿ ತಪಾಸಣೆ ನಡೆಸಿದ್ದು, ಸದ್ಯ ಇಡೀ ಪ್ರಕರಣ ಜಿಲ್ಲೆಯಲ್ಲಿ ತೀವ್ರ ಕುತೂಹಲ ಮೂಡಿಸಿದೆ. ನಗರದ ಕೇಂದ್ರ ಬಸ್ ನಿಲ್ದಾಣದಿಂದ 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದ ಪೊಲೀಸರು, ಮಾಳಮಾರುತಿ ಪೊಲೀಸ್ ಠಾಣೆಗೆ ಕರೆತಂದು ತೀವ್ರ ವಿಚಾರಣೆಗೆ ಒಳಪಡಿಸಿದರು. …