ಹೈದರಾಬಾದ್: ರಸ್ತೆಯಲ್ಲಿ ಮಗುವಿನೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಜೊತೆ ಅತ್ಯಂತ ನೀಚವಾಗಿ ನಡೆದುಕೊಂಡು, ವಿಕೃತಿ ಮೆರೆದಿದ್ದ ಆರೋಪಿಯನ್ನು ಹೈದರಾಬಾದ್‌ನ ನಾರ್ಸಿಂಗಿ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಸಿಸಿಟಿವಿ (CCTV) ದೃಶ್ಯಾವಳಿಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಗಂಡಿಪೇಟ್ ಪುಪ್ಪಲಗೂಡ ನಿವಾಸಿಯಾದ ವಡ್ಡೆ ನಾಗರಾಜು ಎಂಬಾತನನ್ನು ಕಟಕಟೆಗೆ ತಳ್ಳಿದ್ದಾರೆ. ಮೇ 14 ರಂದು ಹೈದರಾಬಾದ್‌ನ ಮಣಿಕೊಂಡ ಪ್ರದೇಶದ ಅಲ್ಕಾಪುರ್ ಟೌನ್‌ಶಿಪ್ ಬಳಿ ಈ ಆಘಾತಕಾರಿ ಘಟನೆ ನಡೆದಿತ್ತು. ಮಹಿಳೆಯೊಬ್ಬರು…
ಬೆಂಗಳೂರು: ಇಲ್ಲಿನ ಕೆ.ಆರ್.ಪುರ ಪೊಲೀಸ್ ವಸತಿ ಸಮುಚ್ಚಯದಲ್ಲಿ ನಡೆದ ಮಹಿಳೆಯೊಬ್ಬರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೆಚ್.ಎ.ಎಲ್ (HAL) ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ರಾಜೇಶ್ ಆರಾಧ್ಯ ಅವರನ್ನು ಕೆ.ಆರ್.ಪುರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ರಾಜೇಶ್ ಆರಾಧ್ಯ ಅವರ ಪತ್ನಿ ಲಕ್ಷ್ಮೀಪ್ರಿಯಾ (24) ಶುಕ್ರವಾರ ಮಧ್ಯಾಹ್ನ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಮೃತಳ ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಕಳೆದ 2023ರಲ್ಲಿ…