ಹೊಸಪೇಟೆ: ಜಿಲ್ಲೆಯ ವಿಜಯನಗರ ತಾಲೂಕಿನ ನಂದಿಬಂಡಿ ಗ್ರಾಮದಲ್ಲಿ ಅಮಾನವೀಯವಾಗಿ ಜೀತಕ್ಕಿರಿಸಿಕೊಂಡಿದ್ದ ಒಡಿಶಾ ಮೂಲದ 37 ಕಾರ್ಮಿಕರನ್ನು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಜಂಟಿ ಕಾರ್ಯಾಚರಣೆಯ ಮೂಲಕ ಯಶಸ್ವಿಯಾಗಿ ರಕ್ಷಿಸಲಾಗಿದೆ. ರಕ್ಷಿಸಲ್ಪಟ್ಟವರಲ್ಲಿ 10 ಮಕ್ಕಳು, 11 ಮಹಿಳೆಯರು ಹಾಗೂ 16 ಪುರುಷರು ಸೇರಿದ್ದಾರೆ. ಬೆಳಗಾವಿ ಮೂಲದ ‘ಸ್ಪಂದನಾ’ ಎಂಬ ಸರ್ಕಾರೇತರ ಸಂಸ್ಥೆ (NGO) ನೀಡಿದ ಖಚಿತ ಮಾಹಿತಿಯ ಮೇರೆಗೆ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರ ಮಾರ್ಗದರ್ಶನದಲ್ಲಿ ಸಹಾಯಕ ಆಯುಕ್ತ ವಿವೇಕಾನಂದ ನೇತೃತ್ವದ ತಂಡ ಈ ದಾಳಿ…
ಬೆಳಗಾವಿ: ನಗರದ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ದುಬಾರಿ ಕಾರನ್ನು ಪೊಲೀಸರು ಕೇವಲ 24 ಗಂಟೆಗಳ ಅವಧಿಯಲ್ಲಿ ಮಹಾರಾಷ್ಟ್ರದ ಮುಂಬೈನಲ್ಲಿ ಪತ್ತೆ ಹಚ್ಚುವ ಮೂಲಕ ಭರ್ಜರಿ ಯಶಸ್ಸು ಸಾಧಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಒಟ್ಟು 29 ಲಕ್ಷ ರೂ. ಮೌಲ್ಯದ ಎರಡು ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬೆಳಗಾವಿ ನಗರದ ನಿವಾಸಿ ಪ್ರೀಯಾಂಕಾ ಚೇತನ ಅಜರೇಕರ ಅವರು ತಮ್ಮ ಕಾರು ಕಳ್ಳತನವಾಗಿರುವ ಬಗ್ಗೆ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ಗಾಂಭೀರ್ಯವನ್ನು ಅರಿತ ಪೊಲೀಸರು ತಕ್ಷಣವೇ…