ಕೆ.ಆರ್. ನಗರ: ಹಣದ ಆಸೆಗಾಗಿ ನಂಬಿಕಸ್ಥನೇ ವೃದ್ಧೆಯೊಬ್ಬರನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಶವವನ್ನು ಶೌಚಾಲಯದ ಯುಜಿಡಿ (UGD) ಗುಂಡಿಯಲ್ಲಿ ಹೂತು ಹಾಕಿರುವ ಘನಘೋರ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಗೌರಮ್ಮ (90) ಕೊಲೆಯಾದ ದುರ್ದೈವಿ. ಇದೇ ಗ್ರಾಮದ ವೀರಭದ್ರ ಎಂಬಾತನೇ ಈ ಕೃತ್ಯ ಎಸಗಿದ ಆರೋಪಿ. ಮೃತ ಗೌರಮ್ಮ ಅವರೊಂದಿಗೆ ಆರೋಪಿ ವೀರಭದ್ರ ಬಹಳ ಆತ್ಮೀಯವಾಗಿ ನಡೆದುಕೊಳ್ಳುತ್ತಿದ್ದನು. ವೃದ್ಧೆಯ ಸಣ್ಣಪುಟ್ಟ ಕೆಲಸಗಳಲ್ಲಿ ಸಹಾಯ ಮಾಡುತ್ತಾ ಅವರ ವಿಶ್ವಾಸ ಗಳಿಸಿದ್ದನು. ಸುಮಾರು 15 ದಿನಗಳ…
ಬೆಂಗಳೂರು: ಮಹಿಳೆಯರೊಂದಿಗಿನ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಡಾ. ಕೆ. ರಾಮಚಂದ್ರರಾವ್ ಅವರ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ರದ್ದುಗೊಳಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಹೊಸ ಹುದ್ದೆಗೆ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಆಲ್ ಇಂಡಿಯಾ ಸರ್ವಿಸ್ (AIS) ನಿಯಮಗಳಡಿ ರಾಮಚಂದ್ರರಾವ್ ಅವರ ಅಮಾನತನ್ನು ಹಿಂಪಡೆದಿರುವ ಸರ್ಕಾರ, ಅವರಿಗಾಗಿಯೇ ‘ಡೈರೆಕ್ಟರ್ ಜನರಲ್ ಆಫ್ ಪೊಲೀಸ್ (ಪೊಲೀಸ್ ಮ್ಯಾನುಯೆಲ್)’ ಎಂಬ ಹೊಸ ಹುದ್ದೆಯನ್ನು ಸೃಷ್ಟಿಸಿ ಅಲ್ಲಿಗೆ ನೇಮಕ…