ಮಡಿಕೇರಿ: ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣವಾದ ರಾಜಾಸೀಟಿಗೆ ಹೊಂದಿಕೊಂಡಂತೆ ಇರುವ ‘ಗ್ರೇಟರ್ ರಾಜಾಸೀಟು’ ಅಭಿವೃದ್ಧಿ ಕಾಮಗಾರಿಯಲ್ಲಿ ದೊಡ್ಡ ಮಟ್ಟದ ಹಣ ದುರುಪಯೋಗ ನಡೆದಿರುವುದು ಲೋಕಾಯುಕ್ತ ತನಿಖೆಯಲ್ಲಿ ಸಾಬೀತಾಗಿದೆ. ಈ ಕುರಿತು ಸಮಗ್ರ ವರದಿಯನ್ನು ಲೋಕಾಯುಕ್ತ ಪೊಲೀಸರು ಈಗ ಸರ್ಕಾರಕ್ಕೆ ಸಲ್ಲಿಸಿದ್ದಾರೆ. 2019ರಲ್ಲಿ ಲೋಕೋಪಯೋಗಿ ಇಲಾಖೆಯ ಮಡಿಕೇರಿ ಉಪವಿಭಾಗ ಕಚೇರಿಯಿಂದ ಸುಮಾರು 4.5 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಪ್ರವಾಸೋದ್ಯಮ ಇಲಾಖೆಯ ಅನುದಾನದಡಿ ತೋಟಗಾರಿಕೆ ಇಲಾಖೆಯ ಜಾಗದಲ್ಲಿ ಈ ಉದ್ಯಾನವನವನ್ನು ನಿರ್ಮಿಸಲಾಗಿತ್ತು. ಆದರೆ, ಕಾಮಗಾರಿಗಳು…
ಚಿಕ್ಕಬಳ್ಳಾಪುರ: ಪ್ರೀತಿಗೆ ಕಣ್ಣಿಲ್ಲ, ವಯಸ್ಸಿನ ಮಿತಿಯಿಲ್ಲ ಎಂಬ ಮಾತಿನಂತೆ, ಇಲ್ಲಿ ವರಸೆಯೂ ಅಡ್ಡಿಯಾಗಿಲ್ಲ! ಸಂಬಂಧದಲ್ಲಿ ಅಕ್ಕ-ತಮ್ಮನಾಗಬೇಕಿದ್ದ ಜೋಡಿಯೊಂದು ಮನೆಯವರ ತೀವ್ರ ವಿರೋಧದ ನಡುವೆಯೂ ಪ್ರೀತಿಸಿ, ಮದುವೆಯಾಗಿ ಈಗ ರಕ್ಷಣೆಗಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ದೇವನಹಳ್ಳಿ ಮೂಲದ ಶಶಿಕಲಾ (29) ಹಾಗೂ ಹೊಸಕೋಟೆಯ ಪ್ರವೀಣ್ (24) ಈ ಪ್ರೇಮ ಕಥೆಯ ನಾಯಕ-ನಾಯಕಿ. ಮೂರು ವರ್ಷಗಳ ಹಿಂದೆ ಸಂಬಂಧಿಕರ ಮನೆಯಲ್ಲಿ ಪರಿಚಯವಾಗಿದ್ದ ಈ ಜೋಡಿ, ನಂತರ ಇನ್‌ಸ್ಟಾಗ್ರಾಮ್ ಮೂಲಕ ನಿರಂತರ ಸಂಪರ್ಕದಲ್ಲಿದ್ದರು. ಕಾಲಕ್ರಮೇಣ ಇವರ ಗೆಳೆತನ ಗಾಢವಾದ ಪ್ರೀತಿಗೆ…