ಬೆಂಗಳೂರು: ಸಿಲಿಕಾನ್ ಸಿಟಿಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹವು ಈಗ ಅಕ್ಷರಶಃ ಅಕ್ರಮ ಚಟುವಟಿಕೆಗಳ ಅಡ್ಡೆಯಾಗಿ ಮಾರ್ಪಟ್ಟಿದೆ. ಕಳೆದ ಮೂರು ತಿಂಗಳ ಅವಧಿಯಲ್ಲಿ ಜೈಲಿನೊಳಗೆ ನಡೆದ ಸರಣಿ ಅಕ್ರಮಗಳಿಗೆ ಸಂಬಂಧಿಸಿದಂತೆ ಬರೋಬ್ಬರಿ 44 ಎಫ್‌ಐಆರ್‌ಗಳು (FIR) ದಾಖಲಾಗಿರುವುದು ಈಗ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ. ಜೈಲಿನ ಕಟ್ಟುನಿಟ್ಟಿನ ಭದ್ರತೆಯ ನಡುವೆಯೂ ಕೈದಿಗಳು ಮೊಬೈಲ್ ಫೋನ್ ಬಳಸುವುದು, ಗಾಂಜಾ ಸೇದುವುದು ಹಾಗೂ ಗುಂಪು ಘರ್ಷಣೆಗಳಲ್ಲಿ ತೊಡಗುವುದು ಸಾಮಾನ್ಯ ಎಂಬಂತಾಗಿದೆ. ಇತ್ತೀಚೆಗೆ ಕೈದಿಗಳು ಜೈಲಿನಲ್ಲೇ ಮೊಬೈಲ್ ಬಳಸಿ…
ರಾಮನಗರ: ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ರೈತರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಗ್ರಾಮದ ನಿವಾಸಿ ಕಾಂತರಾಜು (53) ಮೃತಪಟ್ಟ ರೈತ. ಕಳೆದ ಏಪ್ರಿಲ್ 19ರಂದು ಗ್ರಾಮದ ಬಳಿ ಬೀಡುಬಿಟ್ಟಿದ್ದ ಕಾಡಾನೆಯನ್ನು ಮರಳಿ ಕಾಡಿಗಟ್ಟುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಹಮ್ಮಿಕೊಂಡಿತ್ತು. ಈ ಕಾರ್ಯಾಚರಣೆ ನೋಡಲು ಜನರು ಜಮಾಯಿಸಿದ್ದರು. ಈ ವೇಳೆ ಹಠಾತ್ತನೆ ರೈತರ ಮೇಲೆರಗಿದ ಕಾಡಾನೆ, ತನ್ನ ಜಮೀನಿನಲ್ಲಿದ್ದ ಕಾಂತರಾಜು ಅವರ…