ಮೈಸೂರು: ಜಿಲ್ಲೆಯ ವಿವಿಧ ಭಾಗಗಳಲ್ಲಿ ಇಂದು ಅಬಕಾರಿ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸುವ ಮೂಲಕ ಸಾರ್ವಜನಿಕರಲ್ಲಿ ಸಂಚಲನ ಮೂಡಿಸಿದರು. ನಗರದ ಪ್ರಮುಖ ಬಡಾವಣೆಗಳು ಹಾಗೂ ಕೈಗಾರಿಕಾ ಪ್ರದೇಶಗಳ ಸುತ್ತಮುತ್ತಲಿರುವ ಅನುಮಾನಾಸ್ಪದ ಸ್ಥಳಗಳ ಮೇಲೆ ಈ ಕಾರ್ಯಾಚರಣೆ ನಡೆಯಿತು. ನಗರದ ಬನ್ನಿಮಂಟಪ ಬಡಾವಣೆ, ರಾಡಿಕೋ ಡಿಸ್ಟಿಲರಿ ಸುತ್ತಮುತ್ತಲಿನ ಪ್ರದೇಶಗಳು, ಎನ್.ಆರ್. ಮೊಹಲ್ಲಾ ಹಾಗೂ ಸಿ.ವಿ. ಮೊಹಲ್ಲಾಗಳಲ್ಲಿ ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ನಡೆಸಿತು. ಈ ಸಂದರ್ಭದಲ್ಲಿ ಪ್ರಮುಖ ಗೋಡೌನ್‌ಗಳು ಹಾಗೂ ಗುಜರಿ ಅಂಗಡಿಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಯಿತು….
ಬೀರೂರು (ಚಿಕ್ಕಮಗಳೂರು): ಕೌಟುಂಬಿಕ ಕಲಹದಿಂದ ಬೇಸತ್ತು ಪೊಲೀಸ್ ಉಪನಿರೀಕ್ಷಕರ (PSI) ಪತ್ನಿಯೊಬ್ಬರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನಲ್ಲಿ ನಡೆದಿದೆ. ಬೀರೂರು ಪೊಲೀಸ್ ಠಾಣೆಯ ಠಾಣಾಧಿಕಾರಿ ತಿಪ್ಪೇಶ್ ಅವರ ಪತ್ನಿ ಪದ್ಮ (34) ಮೃತಪಟ್ಟ ದುರ್ದೈವಿ. ಕಳೆದ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಪದ್ಮ ಅವರು ಈ ತೀವ್ರ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತ ಪದ್ಮ ಹಾಗೂ ತಿಪ್ಪೇಶ್ ಅವರು ಪ್ರೀತಿಸಿ ಮದುವೆಯಾಗಿದ್ದು, ಇವರಿಗೆ…