ಮಂಡ್ಯ: ಜಿಲ್ಲೆಯ ಕೆ.ಆರ್. ಪೇಟೆ ಪಟ್ಟಣದಲ್ಲಿ ಸಂಚಲನ ಮೂಡಿಸಿದ್ದ ಭ್ರೂಣಲಿಂಗ ಪತ್ತೆ ಮತ್ತು ಭ್ರೂಣಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಓರ್ವ ಮಹಿಳಾ ವೈದ್ಯೆ ಸೇರಿದಂತೆ ಒಟ್ಟು ಮೂವರು ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿರುದ್ಧ ಫೋಕ್ಸೋ ಸೇರಿದಂತೆ ಒಟ್ಟು 12 ಮೊಕದ್ದಮೆಗಳು ದಾಖಲಾಗಿದ್ದು, ನಾಪತ್ತೆಯಾಗಿರುವ ಮತ್ತೋರ್ವ ವೈದ್ಯೆಗಾಗಿ ತೀವ್ರ ಶೋಧ ಮುಂದುವರಿದಿದೆ. ಬಂಧಿತರನ್ನು ಕೆ.ಆರ್. ಪೇಟೆಯ ಚೇತನ ಮೆಟರ್ನಿಟಿ ಸೆಂಟರ್‌ನ ಡಾ. ದಿವ್ಯಚೇತನಾ, ನಾವಿ ಡಯಾಗ್ನೋಸ್ಟಿಕ್ ಸೆಂಟರ್‌ನ ಡಾ. ವೈ.ಆರ್. ಹರ್ಷಿತ್ ಮತ್ತು ಕುಶಾಲ್ ಡಯಾಗ್ನೋಸ್ಟಿಕ್ ಸೆಂಟರ್‌ನ…
ಚಿಕ್ಕಬಳ್ಳಾಪುರ: ಜಿಲ್ಲೆಯ ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಣಿ ಕಳ್ಳತನ ನಡೆಸಿ ಪೊಲೀಸರಿಗೆ ತಲೆನೋವಾಗಿದ್ದ ಇಬ್ಬರು ಕುಖ್ಯಾತ ಮನೆಗಳ್ಳರನ್ನು ಬಂಧಿಸುವಲ್ಲಿ ವಿಶೇಷ ತಂಡ ಯಶಸ್ವಿಯಾಗಿದೆ. ಬಂಧಿತರಿಂದ ಭಾರಿ ಪ್ರಮಾಣದ ಕಳುವು ಮಾಡಲಾಗಿದ್ದ ಮಾಲನ್ನು ವಶಪಡಿಸಿಕೊಳ್ಳಲಾಗಿದೆ. ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೊ.ಸಂ. 204/2025 ಪ್ರಕರಣ ಸೇರಿದಂತೆ, ಹಲವಾರು ಮನೆಗಳ್ಳತನ ಪ್ರಕರಣಗಳನ್ನು ಭೇದಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಈ ತಂಡವು ತಾಂತ್ರಿಕ ಸಾಕ್ಷ್ಯ ಹಾಗೂ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ…