ಬೆಂಗಳೂರು: ರಾಜಧಾನಿಯ ಉತ್ತರ ತಾಲೂಕಿನ ಗೌಡಹಳ್ಳಿಯಲ್ಲಿ ವಾಷಿಂಗ್ ಮೆಷಿನ್ ಬಳಸುವಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಆದರೆ ಮಗಳ ಸಾವಿನ ಹಿಂದೆ ಅಳಿಯನ ಕೈವಾಡವಿದೆ ಎಂದು ಮೃತರ ಪೋಷಕರು ಗಂಭೀರ ಶಂಕೆ ವ್ಯಕ್ತಪಡಿಸಿದ್ದು, ಘಟನೆ ಈಗ ವಿಚಿತ್ರ ತಿರುವು ಪಡೆದುಕೊಂಡಿದೆ. ಮೃತ ಮಹಿಳೆಯನ್ನು ಸುಜಾತ (30) ಎಂದು ಗುರುತಿಸಲಾಗಿದೆ. ತುಮಕೂರಿನ ಹೆಗ್ಗೆರೆ ನಿವಾಸಿಗಳಾದ ಪಾಂಡುರಂಗಯ್ಯ ಮತ್ತು ಭಾಗ್ಯಮ್ಮ ದಂಪತಿಯ ಪುತ್ರಿಯಾದ ಸುಜಾತ, ಕಳೆದ 10 ವರ್ಷಗಳ ಹಿಂದೆ ರಿಯಲ್ ಎಸ್ಟೇಟ್ ಉದ್ಯಮಿ ಚೇತನ್…
ಹೈದರಾಬಾದ್: ತೆಲುಗು ಚಿತ್ರರಂಗದ ನಟಿ ಹಾಗೂ ಬಿಗ್ ಬಾಸ್ ಖ್ಯಾತಿಯ ಆಶು ರೆಡ್ಡಿ ಅವರು ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ ಸುಮಾರು 10 ಕೋಟಿ ರೂಪಾಯಿ ವಂಚಿಸಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಹೈದರಾಬಾದ್ ಪೊಲೀಸರು ನಟಿ ಮತ್ತು ಆಕೆಯ ಕುಟುಂಬದ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಿದ್ದಾರೆ. ಲಂಡನ್‌ನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ಧರ್ಮೇಂದ್ರ ಎಂಬುವವರನ್ನು ಮದುವೆಯಾಗುವುದಾಗಿ ಆಶು ರೆಡ್ಡಿ ನಂಬಿಸಿದ್ದರು ಎನ್ನಲಾಗಿದೆ. ಸಂತ್ರಸ್ತನ ತಂದೆ ಸತ್ಯನಾರಾಯಣ ಮೂರ್ತಿ ಅವರು…