ಹಳಿಯಾಳ: ತಾಲೂಕಿನ ಹಳಿಯಾಳ-ಕಲಘಟಗಿ ಮುಖ್ಯ ರಸ್ತೆಯ ತೆಗ್ನಳ್ಳಿ ಕ್ರಾಸ್ ಬಳಿ ಅಕ್ರಮವಾಗಿ ಸ್ಫೋಟಕಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಹಳಿಯಾಳ ಪೊಲೀಸರು ಬಂಧಿಸಿ, ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ. ದಿನಾಂಕ 18/04/2026 ರಂದು ಸಂಜೆ ಮೋಟಾರ್ ಸೈಕಲ್ ಮೇಲೆ ಅಕ್ರಮ ಸ್ಫೋಟಕಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಹಳಿಯಾಳ ತಹಶೀಲ್ದಾರ್ ಶ್ರೀ ಫಿರೋಜ್ ಷಾ ಅವರು ನೀಡಿದ ದೂರಿನ ಮೇರೆಗೆ ಹಳಿಯಾಳ ಪೊಲೀಸರು ತಕ್ಷಣ ಕಾರ್ಯಾಚರಣೆಗೆ ಇಳಿದು ಆರೋಪಿಯನ್ನು ಸೆರೆಹಿಡಿದಿದ್ದಾರೆ. ಬಂಧಿತ ವ್ಯಕ್ತಿಯನ್ನು ತಾಲೂಕಿನ ಬಿ.ಕೆ…
ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಹರತಾಳು ಗ್ರಾಮದ ಸಮೀಪದ ಮೀಸಲು ಅರಣ್ಯ ಪ್ರದೇಶದಲ್ಲಿ ಕಚ್ಚಾ ಬಾಂಬ್ ಬಳಸಿ ವನ್ಯಜೀವಿಗಳ ಶಿಕಾರಿ ನಡೆಸುತ್ತಿದ್ದ ಜಾಲವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭೇದಿಸಿದ್ದಾರೆ. ಕಾರ್ಯಾಚರಣೆಯ ವೇಳೆ 45 ಜೀವಂತ ಕಚ್ಚಾ ಬಾಂಬ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಕೋಟೆತಾರಿಗಾದಿಂದ ಹರತಾಳು ಕಡೆಗೆ ಸಾಗುವ ಮುಖ್ಯ ರಸ್ತೆಯ ಪಕ್ಕದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಪ್ರಾಣಿಗಳ ಶಿಕಾರಿ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಹೊಸನಗರ ವಲಯದ ಅರಣ್ಯಾಧಿಕಾರಿಗಳು ಮತ್ತು…